ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ
ಬಂಟ್ವಾಳ : ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ದೇಶದ ಸಂವಿಧಾನ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು.
ಶಾಲಾ ಕನ್ನಡ ಭಾಷಾ ಅಧ್ಯಾಪಕ ಧನರಾಜ್ ದೊಡ್ಡನೇರಳೆ ಅವರು ಸಂವಿಧಾನದ ರಚನೆ, ಸಂವಿಧಾನದ ಮಹತ್ವ, ಸಂವಿಧಾನದಲ್ಲಿ ಅಡಕವಾಗಿರುವ ವಿಧಿಗಳು, ಅನುಚ್ಛೇದಗಳು ಮತ್ತು ಭಾಗಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸಂವಿಧಾನ ರಕ್ಷಣಾ ಪ್ರತಿಜ್ಞಾ ವಿಧಿ ಸ್ವೀಕಾರ ಬೋಧಿಸಲಾಯಿತು.
ವಿದ್ಯಾರ್ಥಿಗಳು ಪ್ರಾರ್ಥನೆ ಮತ್ತು ಸಂವಿಧಾನ ಪೀಠಿಕೆ ವಾಚಿಸಿದರು. ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ನಾಯ್ಕ ಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಶಿಕ್ಷಕಿ ಸುಧಾ ನಾಗೇಶ್, ಶಾಲಾ ನಾಯಕ ಮನ್ವಿತ್ ಸಿ ಪೂಜಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಅಬ್ದುಲ್ ರಾಝಿಕ್ ಸ್ವಾಗತಿಸಿ, ಶಿಕ್ಷಕಿ ತೇಜಸ್ವಿನಿ ವಂದಿಸಿದರು. ಶಿಕ್ಷಕ ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು.