ಬಂಟ್ವಾಳ: ಆಡಳಿತದ ಬಹುಮುಖ್ಯ ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಕಾರ್ಯಗಳನ್ನು ನಿರೂಪಿಸಿರುವ ಸಂವಿಧಾನವು ಪ್ರತಿಯೊಬ್ಬ ಪ್ರಜೆಯ ಹಿತಾಸಕ್ತಿಯನ್ನು ಗಮನವಿರಿಸಿ ರೂಪಿಸಿರುವಂತಹದ್ದು ಎಂದು ಎಸ್.ವಿ.ಎಸ್.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ  ಶಿವಣ್ಣ ಪ್ರಭು ಆವರು ತಿಳಿಸಿದರು. 

 ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ಎನ್.ಎಸ್.ಎಸ್.ಘಟಕ ಹಾಗೂ ಐ.ಕ್ಯೂ.ಎ.ಸಿ. ಸಹಯೋಗದಲ್ಲಿ ನಡೆದ ರಾಷ್ಟ್ರೀಉ ಸಂವಿಧಾನ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. 

ಸಂವಿಧಾನವನ್ನು ವಿಶ್ವದಲ್ಲೇ ಅತ್ಯಂತ ವಿಶಿಷ್ಟವಾಗಿ ರಚಿಸಿದ ಕೀರ್ತಿ ಸಂವಿಧಾನ ಶಿಲ್ಪಿಯಾದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಅವರೊಂದಿಗಿದ್ದ ರಚನಾ ಸಮಿತಿಯ ಸದಸ್ಯರಿಗೆ ಸಲ್ಲುತ್ತದೆ. ಇಂದಿನ ವಿದ್ಯಾರ್ಥಿಗಳು ಸಂವಿಧಾನವನ್ನು ಸರಿಯಾಗಿ ಅರಿತು ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಿದ್ದಲ್ಲಿ ಮಾತ್ರ ಸಂವಿಧಾನವನ್ನು ಗೌರವಿಸಿದಂತಾಗುತ್ತದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಸುಯೋಗ ವರ್ಧನ್ ಡಿ.ಎಮ್. ತಿಳಿಸಿದರು. 

ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ. ಉಪಸ್ಥಿತರಿದ್ದರು. ಇದೇ ವೇಳೆ ಸಂವಿಧಾನ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು.

ಉಪನ್ಯಾಸಕರಾದ  ಮನೋಹರ ಎಸ್ ದೊಡ್ಡಮನಿಕಾರ್ಯಕ್ರಮ  ನಿರೂಪಿಸಿದರು.  ಲಕ್ಷ್ಮಣ್ ಕೆ ವಂದಿಸಿದರು. 

By suddi9

Leave a Reply

Your email address will not be published. Required fields are marked *