ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಚಾರಿದೋಟ ರಸ್ತೆ ದುರಸ್ತಿ ಭರವಸೆ ನೀಡಿದ ಇಂಜಿನಿಯರ್
ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಚಾರಿದೋಟ ರಸ್ತೆಯೂ ಸಂಪೂರ್ಣ ಹದಗೆಟ್ಟಿದ್ದು, ಇಂದು ಎಡಬ್ಲ್ಯೂಇ ಇಂಜಿನಿಯರ್ ಪರಿಶೀಲಿಸಿ ರಸ್ತೆ ದುರಸ್ಥಿ ಮಾಡುವುದಾಗಿ ಭರವಸೆ ನೀಡಿದ್ದಾರೆ.
ವಾಹನ ಸಂಚಾರಕ್ಕೆ ತೊದರೆಯಾಗುತ್ತಿರುವ ಹಿನ್ನಲೆಯಲ್ಲಿ ಇದಕ್ಕೂ ಮುನ್ನ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಸೇರಿದಂತೆ ಸ್ಥಳೀಯರು ರಸ್ತೆ ದುರಸ್ಥಿಯ ಬಗ್ಗೆ ಶಾಸಕರು ಹಾಗೂ ಸಂಸದರಿಗೆ ಮನವಿ ನೀಡಿದ್ದರು. ಈ ಹಿನ್ನಲೆಯಲ್ಲಿ ಇದೀಗ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ಎಡಬ್ಲ್ಯೂಇ ಇಂಜಿನಿಯರ್ ತಾರಾನಾಥ್ ಸಾಲಿಯಾನ್ ಹಾಗೂ ಜ್ಯೂನಿಯರ್ ಇಂಜಿನಿಯರ್ ಜಗದೀಶ್ ಹದಗೆಟ್ಟ ರಸ್ತೆಯನ್ನು ಪರಿಶೀಲಿಸಿ, ನಾಳೆಯಿಂದಲೇ ರಸ್ತೆದುರಸ್ತಿ ಹಾಗೂ ಡಾಮಾರೀಕರಣ ಕೆಲಸವನ್ನು ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.