ಬಂಟ್ವಾಳ:  ರೈತರ ಸಾಲ ಮನ್ನಾ ಬಾಕಿ ಮೊತ್ತ ಬಿಡುಗಡೆಗೊಳಿಸುವಂತೆ ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪ್ರಭಾಕರಪ್ರಭು ಅವರು ಕರ್ನಾಟಕ ಸರಕಾರದ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಲಿಖಿತ ಮನವಿ ಮಾಡಿದ್ದಾರೆ.


ಕರ್ನಾಟಕ ಸರಕಾರವು 2018-19 ನೇ ಸಾಲಿನಲ್ಲಿ ರೈತರು ಪಡೆದಿರುವ ಬೆಳೆ ಸಾಲಗಳ ಪೈಕಿ ಒಂದು ಲಕ್ಷವನ್ನು ಮನ್ನಾ ಮಾಡಿ ಆದೇಶ ಹೊರಡಿಸಲಾಗಿತ್ತು .ಈ ಆದೇಶದಲ್ಲಿನ ನಿಯಾಮವಳಿಯಂತೆ ಸಹಕಾರ ಸಂಘಗಳಲ್ಲಿ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ಪಡೆದಿರುವ ರೈತರ ಅರ್ಜಿಗಳನ್ನು ಪರಿಶೀಲಿಸಿ ಸಾಲ ಮನ್ನಾ ಯೋಜನೆಗೆ ಅರ್ಹರಾದ ಪೈಕಿ ಬಹುತೇಕ ರೈತರಿಗೆ ಸಾಲಮನ್ನಾ ಹಣವನ್ನು ಸರಕಾರ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಿರುತ್ತದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.


ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳಲ್ಲಿ ಸಾಲ ಮನ್ನಾ ಯೋಜನೆಗೆ ಅರ್ಹವಾದ ಹಲವಾರು ರೈತರಿಗೆ ಸಾಲ ಮನ್ನಾ ಹಣ ಬಿಡುಗಡೆಯಾಗಿರುವುದಿಲ್ಲ,ಈ ಬಗ್ಗೆ ಸಾಲ ಮನ್ನಾ ಹಣ ಬಿಡುಗಡೆಯಾಗದೇ ಇರುವ ರೈತ ಸದಸ್ಯರೆಲ್ಲ ದಿನಂಪ್ರತಿ ಬಂದು ಪ್ರಾಥಮಿಕ ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರನ್ನು ತರಾಟೆಗೆ ತೆಗೆದು ಕೊಳ್ಳುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.


ಸಾಲಮನ್ನಾ ಬಗೆಗಿನ ಹಣವನ್ನು ಸರಕಾರ ಬಿಡುಗಡೆ ಮಾಡದೇ ಸರಕಾರದ ಸಹಕಾರ ಇಲಾಖೆ ಮಾಡಿರುವ ಎಡವಟ್ಟಿಗೆ ಕೆಳಹಂತದಲ್ಲಿರುವ ಪ್ರಾಥಮಿಕ ಸಹಕಾರ ಸಂಘಗಳು ತನ್ನ ಸದಸ್ಯರಿಗೆ ಉತ್ತರಿಸಲಾಗದ ಪರಿಸ್ಥಿತಿ ಉಂಟಾಗಿದೆಹಾಗಾಗಿ ಬಾಕಿ ಉಳಿದಿರುವ ರೈತರ ಸಾಲ ಮನ್ನಾ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಮನವಿಯ ಪ್ರತಿಯನ್ನು ಕರ್ನಾಟಕ ಸರಕಾರದ ಸಹಕಾರ ಸಂಘಗಳ ನಿಬಂಧಕರಿಗೂ ರವಾನಿಸಿದ್ದಾರೆ.

By suddi9

Leave a Reply

Your email address will not be published. Required fields are marked *