ಹೆಣ್ಣು ಮಕ್ಕಳ ದೌರ್ಜನ್ಯ ತಡೆಯುವ ಅರಿವು ಕಾರ್ಯಾಗಾರ
ಬಂಟ್ವಾಳ: ಪೊಲೀಸ್ ಬಂಟ್ವಾಳ ಉಪವಿಭಾಗದ ಆಶ್ರಯದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ , ರೋಟರಿ ಕ್ಲಬ್ ಮೊಡಂಕಾಪು, ನಮ್ಮ ನಾಡ ಒಕ್ಕೂಟ(ರಿ) ಬಂಟ್ವಾಳ ಘಟಕ ಮತ್ತು ಕಾರ್ಮೆಲ್ ಕಾಲೇಜು ಮೊಡಂಕಾಪು ಇವರ ಸಹಯೋಗದೊಂದಿಗೆ ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ “ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಹಾಗೂ ಹೆಣ್ಣು ಮಕ್ಕಳ ದೌರ್ಜನ್ಯ ತಡೆಯುವ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ನಡೆಯಿತು.
ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಎಸ್ ವಿಜಯ ಪ್ರಸಾದ್ ರವರು ಸೈಬರ್ ಅಪರಾಧಗಳು, ಮಾದಕ ದ್ರವ್ಯದ ಪರಿಣಾಮಗಳು, ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು.
ರೋಟರಿ ಮೊಡಂಕಾಪು ಅಧ್ಯಕ್ಷರಾದ ಕ್ಯಾಪ್ಟನ್ ಅಲೆಕ್ಸಾಂಡರ್, ರೋಟರಿ ಗವರ್ನರ್ ರೋ. ಡಾ.ಗೋವರ್ಧನ್, ನಮ್ಮ ನಾಡ ಒಕ್ಕೂಟದ ಅಧ್ಯಕ್ಷರಾದ ರಹೀಂ , ನಮ್ಮ ನಾಡ ಒಕ್ಕೂಟದ ಉಪಾಧ್ಯಕ್ಷರಾದ ಇಬ್ರಾಹಿಂರವರು ಹಾಜರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಬಗಿನಿ ನವೀನ ಎ.ಸಿ. ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ,ಸಂಸ್ಥೆಯ ಉಪನ್ಯಾಸಕರು ಭಾಗವಹಿಸಿದ್ದರು.