ಗುರುಪುರ ಪಿಯು, ಪ್ರೌಢ-ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ
ಕೈಕಂಬ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸದ್ರಿ ಕಾಲೇಜು, ಪ್ರೌಢ ಮತ್ತು ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ನ. 29ರಂದು ಶಾಲಾ ಸಭಾಭವನದಲ್ಲಿ ಜರುಗಿತು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಶವಂತ ಆಳ್ವ ಮಾತನಾಡಿ, ಸರ್ಕಾರಿ ಶಾಲಾ-ಕಾಲೇಜುಗಳ ಮೇಲೆ ಶಿಕ್ಷಕ ವೃಂದ, ಉಪನ್ಯಾಸಕರು ಮತ್ತು ಶಾಲಾಭಿವೃದ್ಧಿ ಸಮಿತಿಗಳು ಇಟ್ಟಿರುವ ಪ್ರೀತಿ ಅನನ್ಯ. ಇದಕ್ಕೆ ಪೂರಕವೆಂಬAತೆ ನಡೆದುಕೊಂಡಲ್ಲಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿದೆ. ಮುಂದೆ ಸಮಾಜಕ್ಕೆ ಕೊಡುವ' ವ್ಯಕ್ತಿಗಳಾಗದಿದ್ದರೂ
ಉಪದ್ರವಿ’ಗಳಾಗಬಾರದು. ಸಾಧಿಸುವ ಛಲವಿರಲಿ. ಇಂದು ಬಹುಮಾನ ಸ್ವೀಕರಿಸಿದ ನೀವು ಮುಂದೊAದು ದಿನ ಇಂತಹ ವೇದಿಕೆಗಳಲ್ಲಿ ಬಹುಮಾನ ಕೊಡುವ ಸಾಧಕರಾಗಬೇಕು ಆಶಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಹಾಗೂ ನಿವೃತ್ತ ಕಿರಿಯ ಆರೋಗ್ಯ ಸಹಾಯಕಿ ಜಲಜಾ ಅವರು ಮಾತನಾಡಿ, ಶಾಲಾ ವಾರ್ಷಿಕೋತ್ಸವ ವಿದ್ಯಾರ್ಥಿ ಸಮೂಹಕ್ಕೆ ಹಬ್ಬ. ಇಂದು ಸಂಭ್ರಮಿಸುವ ನೀವು, ಶಿಕ್ಷಣ ಸಾಧನೆಯೊಂದಿಗೆ ಸಂಭ್ರಮಿಸಬೇಕು. ಗುರು ಹಿರಿಯರ ಮೇಲೆ ಭಕ್ತಿಭಾವ ಇರಲಿ ಎಂದು ಹಾರೈಸಿದರು.
ಗುರುಪುರ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಿ. ಎಂ. ಉದಯ ಭಟ್, ಸುನಿಲ್ ಪೂಜಾರಿ ಜಲ್ಲಿಗುಡ್ಡೆ, ರಾಜೇಶ್ ಸುವರ್ಣ, ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸತ್ಯಾನಂದ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜಿ. ಕೆ. ನರಸಿಂಹ ಪೂಜಾರಿ, ಪ್ರೌಢ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಗೀತಾ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಸದಸ್ಯೆ ವಿನೋದಾ ಡಿ. ಅಂಚನ್, ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳು, ಕ್ರೀಡೆ ಹಾಗೂ ಇತರ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪದವಿಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲೆ ಲೊಯೆಲ್ಲಾ ಸಿಕ್ವೇರ, ಪ್ರೌಢ ಶಾಲಾ ಪ್ರಭಾರಿ ಮುಖ್ಯ ಶಿಕ್ಷಕಿ ವೀಣಾ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ಆಳ್ವ ವರದಿ ವಾಚಿಸಿದರು. ಶಿಕ್ಷಕ-ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು. ಶಿಕ್ಷಕಿ ರಶ್ಮಿ ಸ್ವಾಗತಿಸಿದರೆ, ಶಿಕ್ಷಕಿ ರೇಷ್ಮಾ ನಿರೂಪಿಸಿದರು. ಶಿಕ್ಷಕಿ ಸಂಧ್ಯಾರಾಣಿ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.