`ಹೆದ್ದಾರಿ ವಾಹನ ತಡೆ ಪ್ರತಿಭಟನೆ ಇಲ್ಲ’
ಡಾ. ಭರತ್ ಶೆಟ್ಟಿಯಿಂದ 2 ಲ. ರೂ. ನೆರವು
ಉಳಾಯಿಬೆಟ್ಟಿನಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ
ಗುರುಪುರ : ಕಳೆದ 6 ತಿಂಗಳಿAದ ಘನ ವಾಹನ ಸಂಚಾರ ನಿಷೇಧಿಸಲ್ಪಟ್ಟ ಉಳಾಯಿಬೆಟ್ಟು ಸಾಲೆ ಮೇಲ್ಮನೆಯ ಕಿರು ಸೇತುವೆಗೆ ಪರ್ಯಾಯವಾಗಿ ಮಣ್ಣಿನ ತಾತ್ಕಾಲಿಕ ರಸ್ತೆ ನಿರ್ಮಿಸಲು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು 2 ಲಕ್ಷ ರೂ. ವೈಯಕ್ತಿಕ ನೆರವಿನ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 2ರಂದು ಕರೆಯಲಾಗಿರುವ ಹೆದ್ದಾರಿ ವಾಹನ ತಡೆದ ಪ್ರತಿಭಟನೆ ಹಿಂಪಡೆಯಲಾಗಿದೆ ಎಂದು ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಹರಿಕೇಶ್ ಶೆಟ್ಟಿ ತಿಳಿಸಿದ್ದಾರೆ.
ಮನವಿಗೆ ಸ್ಪಂದಿಸಿ, ಅನುದಾನ ಬಿಡುಗಡೆ ಮಾಡಲು ಮುಂದೆ ಬಂದಿರುವ ಶಾಸಕರ ನಡೆ ಬಗ್ಗೆ ಉಳಾಯಿಬೆಟ್ಟು, ಪೆರ್ಮಂಕಿ ಸುತ್ತಲ ಪ್ರದೇಶ ನಾಗರಿಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
ಕಿರು ಸೇತುವೆಗೆ ಪರ್ಯಾಯವಾಗಿ ಮಣ್ಣಿನ ತಾತ್ಕಾಲಿಕ ರಸ್ತೆ ನಿರ್ಮಿಸುವಲ್ಲಿ ನಿರ್ಲಕ್ಷö್ಯ ಧೋರಣೆ ಅನುಸರಿಸುತ್ತಿರುವ ಜಿಲ್ಲಾಡಳಿತ ಕ್ರಮ ವಿರೋಧಿಸಿ, ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಸ್ಥಳೀಯರು ನ. 26ರಂದು ಸಾಲೆ ಮೇಲ್ಮನೆಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ್ದರು.
ಶಾಸಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಉಳಾಯಿಬೆಟ್ಟಿನಲ್ಲಿ ಹೊಸ ಕಿರು ಸೇತುವೆ ಕಾಮಗಾರಿ ಆರಂಭಿಸುವ ಬಗ್ಗೆ ಸಂಬAಧಪಟ್ಟ ಇಲಾಖೆ ಹಾಗೂ ವಿಧಾನಸಭೆಯ ಮುಂಬರುವ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಶಾಸಕರು ಆಶ್ವಾಸನೆ ನೀಡಿದ್ದಾರೆ ಎಂದರು.