ಮಂಗಳೂರು: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು: ಫೆಂಗಲ್ ಚಂಡಮಾರುತ ಆರ್ಭಟ ಜೋರಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಗೂ ಈ ಇದರ ಪರಿಣಾಮ ಬೀರಿದೆ. ಇದು ನಾಳೆಯೂ ಮತ್ತಷ್ಟು ಹೆಚ್ಚಾಗಬಹುದು ಎಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ(ಪದವಿಪೂರ್ವ) ನಾಳೆ ರಜೆ ನೀಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು(ಡಿಸೆಂಬರ್ 02) ಮೈಸೂರು, ಕೋಲಾರ, ಹಾಸನ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ನಾಳೆಯೂ(ಡಿಸೆಂಬರ್ 3) ಸಹ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆಯು ನಾಳೆ ರೆಡ್ ಘೋಷಣೆ ಮಾಡಿದೆ.