ಪೊಳಲಿ: ಕರಿಯಂಗಳ ಗ್ರಾಮ ಪಂಚಾಯತ್‌ ನಲ್ಲಿ ಸ್ವಚ್ಛತಾಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೇಮನಾಥ ಅಮೀನ್.ಕೆ ಅವರು ನ. 10 ರಂದು ವಯೋನಿವೃತ್ತಿ ಹೊಂದಿದ್ದು, ಇವರನ್ನು ಕರಿಯಂಗಳ ಗ್ರಾಮ ಪಂಚಾಯತ್‌ ವತಿಯಿಂದ ಡಿ. 2ರಂದು ಮಂಗಳವಾರ ಬೀಳ್ಕೊಡುಗೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿಕಟ ಪೂರ್ವ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯಾಗಿರುವ ಶ್ರೀಮತಿ ಮಾಲಿನಿ.ಬಿ.ವಿ ಯವರುಆಗಮಿಸಿ ಶುಭಕೋರಿದರು. ಗ್ರಾಮ ಪಂಚಾಯತ್‌ ನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಕು. ಭಾರತಿ, ಹಾಗೂ ನೀರು ಸಮಿತಿ ಸದಸ್ಯರು, ಆಶಾ ಕಾರ್ಯಕರ್ತರು, ಪಂಪು ಚಾಲಕರು, ಎಂ.ಬಿ.ಕೆ, ಎಲ್.ಸಿ.ಆರ್.ಪಿ, ಕೃಷಿ ಸಖಿ, ಪಶು ಸಖಿ, ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಹಾಜರಿದ್ದರು.

By Suddi9

Leave a Reply

Your email address will not be published. Required fields are marked *