ಬಂಟ್ವಾಳ: ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಡಿ.4 ರಂದು ಮಂಗಳೂರಿನ ಸಮಾವೇಶ, ಬಂಟ್ವಾಳದಿಂದ 1500 ಮಂದಿ ಭಾಗಿ

ಬಂಟ್ವಾಳ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ ಹಾಗೂ ದೌರ್ಜನ್ಯ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಡಿ.4 ರಂದು ಮಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ಸುಮಾರು 1500 ಕ್ಕೂ ಹೆಚ್ಚಿನ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಹೇಳಿದ್ದಾರೆ.
ಬಿ.ಸಿ.ರೋಡಿನಲ್ಲಿ ಸೋಮವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು , ‘ಈಗಾಗಲೇ ಪ್ರತೀ ಬೂತ್ ಮಟ್ಟ ಸೇರಿದಂತೆ ಶಕ್ತಿ ಕೇಂದ್ರ, ಮಹಾ ಶಕ್ತಿ ಕೇಂದ್ರ ಹಾಗೂ ವಿವಿಧ ಪ್ರಕೋಷ್ಠ ಮಟ್ಟದಲ್ಲಿ ಪ್ರತ್ಯೇಕ ಸಭೆ ನಡೆಸಲಾಗಿದ್ದು, ಶಾಸಕ ರಾಜೇಶ ನಾಯ್ಕ್ ನೇತೃತ್ವದಲ್ಲಿ ಬಿಜೆಪಿ ವಿವಿಧ ಮೋರ್ಚ್ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸುವರು’ ಎಂದರು.
ಬಿಸಿರೋಡಿನ ಪಕ್ಷದ ಕಚೇರಿಯಲ್ಲಿ ಸೋಮವಾರ ಸಂಜೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಂಡಲದ ಎಲ್ಲಾ ಶಕ್ತಿಕೇಂದ್ರದ ವ್ಯಾಪ್ತಿಯಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದ್ದು, ಬಂಟ್ವಾಳ ಮಂಡಲದ ಎಲ್ಲಾ ಮಹಾಶಕ್ತಿ ಕೇಂದ್ರಗಳಲ್ಲಿ ಶಕ್ತಿಕೇಂದ್ರದ ಪ್ರಮುಖರು, ಬೂತ್ ಸಮಿತಿಯ ಅಧ್ಯಕ್ಷರು, ಸದಸ್ಯರು, ಜಿಲ್ಲಾ ಸಮಿತಿಯ ಸದಸ್ಯರು, ಮೋರ್ಚ್ಗಳ ಪದಾಧಿಕಾರಿಗಳು ಸದಸ್ಯರು ಪ್ರಕೋಷ್ಠದ ಪ್ರಮುಖರು, ಶಾಸಕ ರಾಜೇಶ್ ನ್ಯಾಕ್ ಉಳಿಪ್ಪಾಡಿ ಯವರ ನೇತೃತ್ವದಲ್ಲಿ ಭಗವಹಿಸಲಿದ್ದೇವೆ ಎಂದರು.
ಬಾಂಗ್ಲಾದಲ್ಲಿ ಶೇಖ್ ಹಸೀನಾ ಸರ್ಕಾರ ಪತನಗೊಂಡ ಬಳಿಕ ಸೇನಾ ಬೆಂಬಲ ಹೊಂದಿರುವ ಮಹಮ್ಮದ್ ಯೂನುಸ್ ಸರ್ಕಾರ ಆಡಳಿತ ನಡೆಸುತ್ತಿದ್ದು, ದೌರ್ಜನ್ಯ ವಿರುದ್ಧ ಧ್ವನಿ ಎತ್ತಿದ್ದ ಇಸ್ಕಾನ್ ಸಂತ ಚಿನ್ಮಯ್ ಕೃಷ್ಣದಾಸ ಪ್ರಭು ಅವರನ್ನು ಬಂಧಿಸಿರುವುದು ಖಂಡನೀಯ’ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ದಿನೇಶ್ ಅಮ್ಟೂರು, ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಪುರುಷೋತ್ತಮ ಶೆಟ್ಟಿ, ಕಾರ್ತಿಕ್ ಬಲ್ಲಾಳ್ ಮತ್ತಿತರರು ಇದ್ದರು.