ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿ ನೌಷಾದ್ ಮನೆ ಮೇಲೆ NIA ದಾಳಿ
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ನೌಷಾದ್(27) ಮನೆಗೆ NIA ದಾಳಿ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ನೌಷಾದ್ ಮನೆ ಮೇಲೆ ಐದು ಜನರ ಎನ್.ಐ.ಎ ತಂಡದಿಂದ ದಾಳಿ ನಡೆಸಿದೆ. ದಾಳಿ ವಿಚಾರ ತಿಳಿದು ಮನೆ ಲಾಕ್ ಮಾಡಿ ಮನೆಯವರು ಪರಾರಿಯಾಗಿದ್ದಾನೆ. ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಪರಾರಿಯಾಗಿರುವ ಆರೋಪಿ ನೌಷದ್. ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು ಜೊತೆ ದಾಳಿ ನಡೆಸಲಾಗಿದೆ. ನೌಷದ್ ಪತ್ತೆಗಾಗಿ 2 ಲಕ್ಷ ರಿವಾರ್ಡ್ ಘೋಷಣೆ ಮಾಡಲಾಗಿದೆ. .