ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ
ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಣಿ-ಉಳ್ಳಾಲ ರಾಜ್ಯ ಹೆದ್ದಾರಿಯ ಸಜೀಪಮೂಡ ಗ್ರಾಮದ ಕಂದೂರು ಎಂಬಲ್ಲಿ ಸುಮಾರು 4 ಲ.ರೂ.ವೆಚ್ಚದಲ್ಲು ನೂತನವಾಗಿ ನಿರ್ಮಾಣಗೊಂಡ ಸ್ವಾಗತ ಮಹದ್ವಾರದ ಲೋಕಾರ್ಪಣೆ ನೆರವೇರಿಸಲಾಯಿತು.

ಬ್ರಹ್ಮಶ್ರೀ ನೀಲೇಶ್ವರ ಕೆ.ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಮಹಾದ್ವಾರದ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತುಅವರು ವಹಿಸಿದ್ದರು.
ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಮೆಸ್ಕಾಂ ಬಂಟ್ವಾಳ ಕಾರ್ಯನಿರ್ವಾಹಕ ಅಭಿಯಂತರರಾದ ನಾರಾಯಣ ಭಟ್, ಸ್ಕ್ಯಾಡ್ಸ್ ಅಧ್ಯಕ್ಷ ಕೆ. ರವೀಂದ್ರ ಕಂಬಳಿ,ಪ್ರಮುಖರಾದ ಶಿವರಾಮ ಮಯ್ಯ, ಮಹಾಬಲ ಕೊಟ್ಟಾರಿ,ಸುಧಾಕರ ಆಚಾರ್ಯ, ದೇವಸ್ಥಾನದ ದೇವಸ್ಥಾನ ಸಮಿತಿ ಅಧ್ಯಕ್ಷ ಎ.ಜಯಶಂಕರ ಭಾಸ್ರಿತ್ತಾಯ ಮೊದಲಾದವರು ಉಪಸ್ಥಿತರಿದ್ದರು