ಗದಗ: ಸರಿಯಾದ ಸಮಯಕ್ಕೆ ಬಸ್ಸು ಬರುತ್ತಿಲ್ಲ, ಬಸ್ ನಿಲ್ದಾಣದಲ್ಲಿ ದಿಢೀರ್ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣಕ್ಕೆ ಸರಿಯಾದ ಸಮಯಕ್ಕೆ ಬಸ್ಸು ಬರುತ್ತಿಲ್ಲ ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ಮಾಡಿದ್ದಾರೆ. 4.30ಕ್ಕೆ ಬಿಡುವ ಬಸ್ಸು 6 ಗಂಟೆಯಾದ್ರೂ ಬಸ್ ಬರುತ್ತಿಲ್ಲ. ಇದರಿಂದ ಸಿಟ್ಟಿಗೆದ್ದ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣ ಎದುರು ಪಾಲಾಬದಾಮಿ ರಸ್ತೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ ಮಾಡಲಾಗಿದೆ.
ಸರಿಯಾದ ಸಮಯಕ್ಕೆ ಬಸ್ ಬರದೇ ಪ್ರಾಥಮಿಕ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿರ ಪರದಾಡುವಂತಾಗಿದೆ. ಬೆಳಗ್ಗೆ 8 ಗಂಟೆಗೆ ವಿವಿಧ ಗ್ರಾಮಗಳಿಂದ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಇಲ್ಲಿಗೆ ಆಗಮಿಸುತ್ತಾರೆ. ಇನ್ನು ಬಸ್ ಸಿಗುವುದಿಲ್ಲ ಎಂದು ಬುತ್ತಿ ಕಟ್ಟಿಕೊಂಡ ಬಂದು ಶಾಲೆಯಲ್ಲಿ ತಿಂಡಿ ತಿನ್ನುವ ಎಂದರೆ ಈ ಬಸ್ಗಳೇ ಸರಿಯಾದ ಸಮಯಕ್ಕೆ ಬರುವುದಿಲ್ಲ ಎಂದು ವಿದ್ಯಾರ್ಥಿಗಳು ದೂರುತ್ತಿದ್ದಾರೆ.
ಕುಂದ್ರಳ್ಳಿ ಗ್ರಾಮ ಸೇರಿ ವಿವಿಧ ಗ್ರಾಮಗಳ ಮಕ್ಕಳ ಈ ಬಗ್ಗೆ ದೂರು ನೀಡಿದ್ದಾರೆ. ಸರಿಯಾಗಿ ಬಸ್ ಸಿಗದೆ ದಿನನಿತ್ಯ ಒಂದಲ್ಲಾ ಒಂದು ಸಮಸ್ಯೆ ಎದುರಿಸುತ್ತಿದ್ದಾರೆ. ಜತೆಗೆ ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.