ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರು
ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರು ಆಗಿದೆ.ಆಗಸ್ಟ್ 24ರಂದು ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಅಲ್ತಾಫ್ ಬಂಧಿಸಲಾಗಿತ್ತು. ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಮಾಡಲಾಗಿದೆ ಎಂದು ಹೇಳಲಾಗಿತ್ತು. ಇದೀಗ ಈ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿದೆ. ಆಗಸ್ಟ್ 24ರಂದು ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಒಟ್ಟು ಮೂವರ ಬಂಧನವಾಗಿತ್ತು. ಈ ಅತ್ಯಾಚಾರ ಪ್ರಕರಣ ಇಡೀ ಜಿಲ್ಲೆಯಲ್ಲಿ
ಸಂಚಲನ ಮೂಡಿಸಿತ್ತು. ಮಾದಕ ವಸ್ತು ನೀಡಿ ಅತ್ಯಾಚಾರ ಮಾಡಿ ಅತ್ಯಾಚಾರ ಮಾಡಿದ್ದಾರೆ. ಇದು ರಾಜಕೀಯ ತಿರುವು ಕೂಡ ಪಡೆದಿತ್ತು.