ಪುದು: ಜನಸಂಪರ್ಕ ಸಭೆ ಹಿನ್ನೆಲೆ ಅಧಿಕಾರಿಗಳ ಸಮಾಲೋಚನಾ ಸಭೆ
ಬಂಟ್ವಾಳ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮ ಸೇರಿದಂತೆ ಪುದು ಮತ್ತು ಮೇರಮಜಲು ಗ್ರಾಮ ವ್ಯಾಪ್ತಿಯಲ್ಲಿ ಶೀಘ್ರವೇ ಜನಸಂಪರ್ಕ ಸಭೆ ನಡೆಯಲಿದೆ.
ಇದರಿಂದಾಗಿ ಅಲ್ಲಿನ ಅರ್ಹ ಫಲಾನುಭವಿಗಳಿಗೆ ಸರಕಾರದಿಂದ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡುವುದರ ಜೊತೆಗೆ ಸ್ಥಳೀಯ ಪಿಡಿಒ ಮತ್ತು ಗ್ರಾಮಾಡಳಿತ ಅಧಿಕಾರಿಗಳು ಅರ್ಜಿ ಸ್ವೀಕರಿಸಿ ಪ್ರತಿದಿನ ತಹಶೀಲ್ದಾರರಿಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಹಾಯಕ ಕಮಿಷನರ್ ಹರ್ಷವರ್ಧನ್ ಸೂಚಿಸಿದ್ದಾರೆ.
ಬಂಟ್ವಾಲ ತಾಲೂಕು ಪಂಚಾಯಿತಿನ ಎಸ್ ಜಿಎಸ್ ವೈ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿ,ಈ ಬಗ್ಗೆ ವಿವಿಧ ಇಲಾಖಾಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಮುಂದಿನ ಸಭೆಯಲ್ಲಿ ವರದಿ ಸಲ್ಲಿಸುವಂತೆಯು ಎಂದು ಅವರು ಆದೇಶಿಸಿದರು.
ಉಪ ತಹಶೀಲ್ದಾರ್ ನರೇಂದ್ರನಾಥ, ದಿವಾಕರ ಮುಗುಳ್ಯ ಪಡ್ಜಾಲು, ಕಂದಾಯ ನಿರೀಕ್ಷಕ ವಿಜಯ ಮತ್ತಿತರರು ಇದ್ದರು. ಉಪ ತಹಶೀಲ್ದಾರ್ ಶಿವಪ್ರಸಾದ್ ಸ್ವಾಗತಿಸಿ, ವಂದಿಸಿದರು.