ಬಂಟ್ವಾಳ: ಕಡಬ ತಾಲೂಕು ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಎಂಬವರು ಸರಕಾರಿ ಜಮೀನು ಅತಿಕ್ರಮಣ ಸ್ಥಳ ಭೇಟಿ ನೀಡಿದ ವೇಳೆ ಅತಿಕ್ರಮಣದಾರರಾದ ಮುತ್ತು ಸ್ವಾಮಿ ಮತ್ತು ಇತರರು ಸೇರಿ ಹಲ್ಲೆ ನಡೆಸಿರುವುದನ್ನು ಬಂಟ್ವಾಳ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಖಂಡಿಸಿದ್ದು,  ಆರೋಪಿಗಳ ಬಂದನಕ್ಕೆ ಆಗ್ರಹಿಸಿ ಶನಿವಾರ ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿತು.


ಆರೋಪಿಗಳ ಬಂಧನಕ್ಕೆ ಭಾನುವಾರದವರೆಗೆ ಗಡವು ವಿಧಿಸಿರುವ ಸಂಘ ಸೋಮವಾರದಿಂದ ಲೇಖನಿ‌ ಸ್ಥಗಿತ ಹೋರಾಟವನ್ನು ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ.
ಮನವಿ ಸಲ್ಲಿಸುವ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಅನಿಲ್ ಕೆ ಪೂಜಾರಿ, ಗೌರವಾಧ್ಯಕ್ಷರಾದ ಪ್ರವೀಣ್ ಕುಮಾರ್, ಉಪಾಧ್ಯಕ್ಷರಾದ ಕರಿಬಸಪ್ಪ ನಾಯಕ್, ಕಾರ್ಯದರ್ಶಿ ಪ್ರಶಾಂತ್, ಜಿಲ್ಲಾ ಪ್ರತಿನಿಧಿ ಮತ್ತಿಹಳ್ಳಿ‌ಪ್ರಕಾಶ್, ಖಜಾಂಚಿ ವೈಶಾಲಿ ಎ,
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಸೀತಾರಾಮ ಪೂಜಾರಿ, ಗೌರವ ಸಲಹೆಗಾರರಾದ ನವೀನ್ ಬೆಂಜನಪದವು, ರಾಜ್ಯ ಪರಿಷತ್ ಸದಸ್ಯರಾದ ಜೆ ಜನಾರ್ಧನ್,ಕಂದಾಯ ನೌಕರರ ಸಂಘದ ಗೌರವಾಧ್ಯಕ್ಷರಾದ ರಾಜೇಶ್ ನಾಯ್ಕ್, ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.. 

By Suddi9

Leave a Reply

Your email address will not be published. Required fields are marked *