ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ಬೆಂಜನಪದವು ರಾಮನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ಇದರ ಅಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಲೋಕಾರ್ಪಣೆ ಹಾಗೂ ಶ್ರೀ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜ.18 ,19ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದ ಸಾನಿಧ್ಯದಲ್ಲಿ ನಡೆಯಿತು.

ಬೆಂಜನಪದವು ಶ್ರೀ ಭದ್ರಾಕಾಳಿ ದೇವಸ್ಥಾನದ ಧರ್ಮದರ್ಶಿ ರಮೇಶ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕಳ್ಳಿಗೆ ಗ್ರಾ ಪಂ ಸದಸ್ಯೆ ರೇಷ್ಮಾ ಸತೀಶ್, ಆಡಳಿತ ಟ್ರಸ್ಟ್ ನ ಅಧ್ಯಕ್ಷ ಪ್ರವೀಣ್ ಬೆಂಜನಪದವು, ಪ್ರ.ಕಾರ್ಯದರ್ಶಿ ಸುಬ್ರಮಣ್ಯ ಭಟ್, ಕೋಶಾಧಿಕಾರಿ ದಿಲೀಪ್ ಪಕ್ಕೊಳಿಮಾರ್, ಬ್ರಹ್ಮಕಲಶ ಸಮಿತಿಯ ಪ್ರ. ಕಾರ್ಯದರ್ಶಿ ಮನೋಜ್ ಶರ್ಮ, ಮಹಿಳಾ ಸಮಿತಿಯ ಅಧ್ಯಕ್ಷೆ ಭವ್ಯ ಪ್ರವೀಣ್ ಬೆಂಜನಪದವು, ಲೋಕೇಶ್ ರಾಮನಗರ, ಗೀತಾ ದಿನೇಶ ರಾಮನಗರ,ಉದಯ ಕುಮಾರ್ ರಾಮನಗರ ಮತ್ತಿತರರಿದ್ದರು.
