ಬಂಟ್ವಾಳ: ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್ ರಜತ ಮಹೋತ್ಸವ
ದೇಶದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಉದ್ದೇಶದಿಂದ ಸಾಕಷ್ಟು ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಪ್ರಾರಂಭಗೊಂಡಿದ್ದು, ದ.ಕ., ಉಡುಪಿ ಜಿಲ್ಲೆಯಲ್ಲಿ ಇಂತಹ ಶಿಕ್ಷಣ ಸಂಸ್ಥೆಗಳನ್ನು ಸೇರಿಸಿಕೊಂಡು ಮೀಫ್ ಎಂಬ ಸಂಘಟನೆಯನ್ನು ರಚಿಸಿ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಶಿಕ್ಷಣ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ದ.ಕ.-ಉಡುಪಿ ಜಿಲ್ಲಾ ಮೀಫ್ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಹೇಳಿದರು.ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿರು.
ಫಾತಿಮಾ ಮೆಮೋರಿಯಲ್ ಎಜ್ಯುಕೇಶನಲ್ ಟ್ರಸ್ಟ ಚೇರ್‌ಮೆನ್ ಹಾಜಿ ಜಿ.ಅಬೂಬಕ್ಕರ್ ಗೋಳ್ತಮಜಲು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ ಅವರು ರಜತ ರತ್ನ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಬ್ಲೂ ರಾಯಲ್ ಗ್ರೂಫ್ ಆಫ್ ಕಂಪೆನೀಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ರೊನಾಲ್ಡ್ ಮಾರ್ಟಿಸ್ ಅವರು ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ ಪುರುಷೋತ್ತಮ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಬಂಟ್ವಾಳ ತಾ.ಪಂ.ಮಾಜಿ ಅಧ್ಯಕ್ಷ ಪದ್ಮನಾಭ ರೈ ಭಾಗವಹಿಸಿದ್ದರು.
ಶಿಕ್ಷಕ ರಕ್ಷಕ ಸಂಘದ ಸಂಘದ ಹಮೀದ್ ಆಲಿ, ಉಪಾಧ್ಯಕ್ಷೆ ಪುಷ್ಪಾ ಸತೀಶ್, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಅಬ್ದುಲ್ ಹಮೀದ್ ಗೋಳ್ತಮಜಲು, ಬಿ.ಮೂಡ ಸರಕಾರಿ ಪ.ಪೂ.ಕಾಲೇಜಿನ ಉಪನ್ಯಾಸಕ ಅಬ್ದುಲ್ ಖಾದರ್ ಅತಿಥಿಯಾಗಿ ಭಾಗವಹಿಸಿದ್ದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಭಾಗವಹಿಸಿದ್ದರು. ಇದೇ ವೇಳೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಂತರಾದ ಸಂಸ್ಥೆಯ ಟ್ರಸ್ಟಿ ಹಾಜಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಮತ್ತು ಕಲ್ಲಡ್ಕ ಮ್ಯೂಸಿಯಂ ಇದರ ಕೆ ಎಸ್ ಯಾಸೀರ್ ಕಲ್ಲಡ್ಕ ಹಾಗೂ ಉದ್ಯಮಿ ರೊನಾಲ್ಡ್ ಮಾರ್ಟಿಸ್ ಅವರನ್ನು ಸನ್ಮಾನಿಸಲಾಯಿತು.
ಶಿಕ್ಷಕಿ ನಾಝಿಯಾ ಸ್ವಾಗತಿಸಿ, ಫಾತಿಮಾ ಮೆಮೋರಿಯಲ್ ಎಜ್ಯುಕೇಶನಲ್ ಟ್ರಸ್ಟ್ ಇದರ ಮ್ಯಾನೇಜಿಂಗ್ ಟ್ರಸ್ಟಿ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಮಾಜಿಕ ಸಂಘಟಕ ಹಾಜಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಪ್ರಸ್ತಾವನೆಗೈದರು. ಶಾಲಾ ಮುಖ್ಯ ಶಿಕ್ಷಕ ನಿರಂಜನ್ ಡಿ ವಂದಿಸಿದರು. ಶಾಲಾ ಸಂಚಾಲಕ ಹಾಜಿ ಜಿ ಅಹ್ಮದ್ ಮುಸ್ತಫಾ ಕಾರ್ಯಕ್ರಮ ನಿರೂಪಿಸಿದರು.