ಪ್ರತಿ ವರ್ಷ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಇದ್ದೇ ಇರುತ್ತದೆ: ದಿನೇಶ್ ಗುಂಡೂರಾವ್
ಬಾಣಂತಿಯರ ಸಾವಿನ ಬಗ್ಗೆ ದಕ್ಷಿಣ ಕನ್ನಡ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ. ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಹೇಳಿದರು. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾತನಾಡಿದ ಅವರು, ಬಾಣಂತಿಯರ ಸಾವಿನ ವಿಚಾರವಾಗಿ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆ ಆಗಬೇಕು. ಅದಕ್ಕೆ ನಾವು ಉತ್ತರ ನೀಡುತ್ತೇವೆ ಎಂದರು.
ಬಾಣಂತಿಯರ ಸಾವಿನ ಬಗ್ಗೆ ನಿಜಾಂಶಗಳ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಬಾಣಂತಿಯರ ಮರಣಗಳು ಆಗುತ್ತಿವೆ, ಅದಕ್ಕೆ ವೈದ್ಯಕೀಯ ಕಾರಣ ಎನ್ನಲಾಗದು. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವ್ಯವಸ್ಥೆಗಳನ್ನು ಸರಿಪಡಿಸುವ ಕೆಲಸ ಸಾಕಷ್ಟು ಆಗುತ್ತಿದೆ. ಬಾಣಂತಿಯರ ಮರಣಗಳ ಬಗ್ಗೆ ಬೆಳಗಾವಿ ಅಧಿವೇಶನಲ್ಲಿ ಉತ್ತರ ಕೊಡಲಾಗುವುದು. ಸರ್ಕಾರ ಮೇಡಿಕಲ್ ಮಾಫಿಯಾ ಹಿಡಿತಕ್ಕೆ ಸಿಲುಕಿದೆಯಾ ಎಂಬ ವಿಚಾರವಾಗಿ ಸದನದಲ್ಲಿ ನಾನು ಚರ್ಚೆ ಮಾಡುತ್ತೇನೆ. ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕು. ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣದ ವಿಚಾರವಾಗಿ ನಮಗೆ ಬಹಳ ಚಿಂತೆ ಇದೆ. ಸರ್ಕಾರವೂ ಎಚ್ಚೆತ್ತುಕೊಂಡಿದೆ ಎಂದರು.