ಮಂಗಳೂರು: ಅನಿಲ ಟ್ಯಾಂಕರ್‌ನಿಂದ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆ ಆಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದೆ.ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್‌ನಿಂದ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆ ಆಗಿದೆ. ಸ್ಥಳಕ್ಕೆ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಧಾವಿಸಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಎಂಆರ್‌ಪಿಎಲ್ ತಂಡ ಮತ್ತು ಅಗ್ನಿ ಶಾಮಕ ದಳದವರು ಧಾವಿಸಿದ್ದಾರೆ. ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆಯಾಗುತ್ತಿರುವ ಟ್ಯಾಂಕ್ ಅನ್ನು ಎಂಆರ್‌ಪಿಎಲ್ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಲಾಗಿದ್ದು, ಎಂಸಿಲ್ ಹಾಕಿ ಮುಚ್ಚಿದರು ಅನಿಲ ಸೂರಿಕೆ ಆಗುತ್ತಿದೆ. ಕಾರವಾರದಿಂದ ಕೊಚ್ಚಿಗೆ ಹೈಡ್ರಾಲಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆಯಾಗಿದೆ.

ಈ ಟ್ಯಾಂಕರ್​​​ನಿಂದ ಅನಿಲ ಸೊರಿಕೆಯಾಗುತ್ತಿರುವುದನ್ನು ಕಂಡು ಚಾಲಕ ತಕ್ಷಣ ಟ್ಯಾಂಕರ್​​ನ್ನು ನಿಲ್ಲಿಸಿದ್ದಾನೆ. ತಕ್ಷಣ ಈ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ. ಅನಿಲ ಸೋರಿಕೆಯಿಂದ ಸ್ಥಳೀಯ ನಿವಾಸಿಗಳಲ್ಲಿ ಉಸಿರಾಟ ತೊಂದರೆ ಉಂಟಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ, ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನಸವಾರರಿಗೆ ನೀಡಿಲ್ಲ ಎಂದು ಹೇಳಲಾಗಿದೆ.

By suddi9

Leave a Reply

Your email address will not be published. Required fields are marked *