ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ ಅವರು ನಿಧನ ಹೊಂದಿದ ಕಾರಣ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಣೆ ಮಾಡಿದೆ ಸರ್ಕಾರ. ಇದರ ಜತೆಗೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.

ಎಸ್​ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಎಸ್​ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ‌ ನಡೆಯಲಿದೆ. ಇನ್ನು ಎಸ್​ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ:

ಎಸ್​ಎಂ ಕೃಷ್ಣ ಓರ್ವ ಅಸಾಧಾರಣ ನಾಯಕರಾಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ಹಿರಿಯ ನಾಯಕ ಎಸ್​ಎಂ ಕೃಷ್ಣ ನಿಧನರಾಗಿದ್ದಾರೆ, ಎಕ್ಸ್​ನಲ್ಲಿ ಪೋಸ್ಟ್​ ಮಾಡಿ ಮೋದಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಎಸ್​ಎಂ ಕೃಷ್ಣ ಅವರು ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ಶ್ರಮಿಸಿದ್ದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಗಮನಹರಿಸಿದ್ದಾರೆ. ಅವರು ಉತ್ತಮ ಓದುಗ ಮತ್ತು ಚಿಂತಕರೂ ಆಗಿದ್ದರು ಎಂದು ಬರೆದಿದ್ದಾರೆ.

By suddi9

Leave a Reply

Your email address will not be published. Required fields are marked *