Published On: Thu, Dec 12th, 2024

ಸ್ಪೀಕರ್ ಯು.ಟಿ.ಖಾದರ್ ಕ್ಷೇತ್ರದಲ್ಲಿ ಮಸೀದಿ ಮೈಕ್ ವಿವಾದ: ಮಸೀದಿ ಮೈಕ್ ಬಂದ್ ಮಾಡಿಸಿದ ಪೊಲೀಸರು

ಮಂಗಳೂರು:ಮಂಗಳೂರಿನಲ್ಲಿ ಮತ್ತೆ ತಲೆ ಎತ್ತಿತಾ ಮಸೀದಿ ಮೈಕ್ ವಿವಾದ. ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪೊಲೀಸರು ಮಸೀದಿ ಮೈಕ್ ಬಂದ್ ಮಾಡಿಸಿದ್ದಾರೆ. ಸಂಜೆ 7 ಗಂಟೆಗೆ ಮಸೀದಿಯೊಂದರಲ್ಲಿ ಧ್ವನಿವರ್ಧಕ ಬಳಸಿದಕ್ಕೆ ಪೊಲೀಸರಿಂದ ಆಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಈ ಘಟನೆ ಸ್ಪೀಕರ್ ಯು.ಟಿ.ಖಾದರ್ ಕ್ಷೇತ್ರದಲ್ಲಿ ನಡೆದಿದೆ. ಇದೀಗ ಇದು ಹೊಸ ವಿವಾದಕ್ಕೆ ಕಾರಣವಾಗಿದೆ.

ಉಳ್ಳಾಲ ವ್ಯಾಪ್ತಿಯ ಸೋಮೇಶ್ವರ ಪೆರಿಬೈಲ್ ಮಸೀದಿಯಲ್ಲಿ ಈ ಘಟನೆ ನಡೆದಿದೆ. ಸಂಜೆ 7 ಗಂಟೆಯ ವೇಳೆ ಧಾರ್ಮಿಕ ಕಾರ್ಯಕ್ರಮದ ವೇಳೆ ಮೈಕ್ ಬಳಕೆ ಮಾಡಲಾಗಿದೆ. ಅನುಮಾನಾಸ್ಪದ ಚಟುವಟಿಕೆ ಆರೋಪಿಸಿ ಅಪರಿಚಿತರಿಂದ ದೂರು ಬಂದಿದೆ. ಸಹಾಯವಾಣಿ 112ಕ್ಕೆ ಅಪರಿಚಿತರು ದೂರು ನೀಡಿದ್ದಾರೆ. ತಕ್ಷಣ ಉಳ್ಳಾಲ ಪೊಲೀಸರು ಮಸೀದಿಗೆ ದೌಡಾಯಿಸಿದ್ದಾರೆ. ಇದೀಗ ಈ ಘಟನೆ ತೀವ್ರ ವಿವಾದದ ಸ್ವರೂಪ ಪಡೆದುಕೊಂಡಿದೆ.

ಇನ್ನು ಪೊಲೀಸರ ಈ ನಡೆಗೆ ಪೆರಿಬೈಲ್ ಮುಸ್ಲಿಂ ಮುಖಂಡರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಧಾರ್ಮಿಕ ಕಾರ್ಯಕ್ರಮದ ವೇಳೆ ಪೊಲೀಸರು ಬಂದು ಗದರಿಸಿದ್ದಾರೆ. ನಾವು ಸಮಯವಲ್ಲದ ಸಮಯದಲ್ಲಿ ಮೈಕ್ ಬಳಸಿಲ್ಲ, ಸಂಜೆ 7 ಗಂಟೆಗೆ ಮೈಕ್ ಹಾಕಿ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. 10 ಗಂಟೆವರೆಗೆ ಮೈಕ್ ಬಳಸಲು ಅವಕಾಶ ಇದೆ, ಮತ್ತೆ ನಮಗ್ಯಾಕೆ ವಿರೋಧ? ನಾವು ರಾತ್ರಿ 10 ರಿಂದ ಬೆಳಗ್ಗೆ 6 ವರೆಗೂ ಮೈಕ್ ಬಳಸೋದಿಲ್ಲ ಎಂದು ಮುಚ್ಚಳಿಕೆ ಬರೆದಿದ್ದೇವೆ. ಪೊಲೀಸರು ಮಸೀದಿ ಮದರಸದ ಬಳಿ ಗದರಿಸೋದು ಬೆದರಿಸೋದು ನಿಲ್ಲಿಸಬೇಕು. ಜಿಲ್ಲಾಡಳಿತ ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಬೇಕು ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಗಮನಕ್ಕೆ ಬರುವವರೆಗೂ ಹೋರಾಡುತ್ತೇವೆ ಎಂದು ಪೆರಿಬೈಲ್ ಮಸೀದಿ ಅಧ್ಯಕ್ಷ ಅಬ್ಬಾಸ್ ಹಾಜಿ ಹೇಳಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter