ಬಂಟ್ವಾಳ: ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಬಂಟ್ವಾಳ : ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಉದ್ಯಮಿ, ಶಾಲಾ ಹಿರಿಯ ವಿದ್ಯಾರ್ಥಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಭಾಗವಹಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ವಿದ್ಯೆ ಜೊತೆಗೆ ಶಿಸ್ತು ಸಂಸ್ಕಾರ ಕಲಿಯುವುದು ವಿದ್ಯಾರ್ಥಿ ಜೀವನದಲ್ಲಿ ಅತೀ ಮುಖ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲೇ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು ಕರೆ ನೀಡಿದರು.
ಶ್ರೀ ಶಾರದಾ ಹೈಸ್ಕೂಲ್ ಟ್ರಸ್ಟ್ ಅಧ್ಯಕ್ಷ ಎನ್ ನರೇಂದ್ರನಾಥ್ ಕುಡ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಕಾರ್ಯದರ್ಶಿ ರವೀಂದ್ರ, ಎಸ್ ಎಲ್ ಎನ್ ಪಿ ವಿದ್ಯಾಲಯದ ಸಂಚಾಲಕ ಸುಬೋಧ್ ಪ್ರಭು, ಶಾಲಾ ಹಿರಿಯ ವಿದ್ಯಾರ್ಥಿ, ಉದ್ಯಮಿ ಮುಹಮ್ಮದ್ ರಫೀಕ್ ಕಲ್ಲಡ್ಕ, ಶಾಲಾ ವಿದ್ಯಾರ್ಥಿ ನಾಯಕ ಮನ್ವಿತ್ ಸಿ ಪೂಜಾರಿ, ನಿವೃತ್ತ ಮುಖ್ಯ ಶಿಕ್ಷಕ ಭೋಜ, ನಿವೃತ್ತ ಶಿಕ್ಷಕ ರಾಧಾಕೃಷ್ಣ ಬಾಳಿಗಾ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ವೆಂಕಟರಾವ್ ಕಾಮತ್ ಭಾಗವಹಿಸಿದ್ದರು.
ಇದೇ ವೇಳೆ ಶಾಲಾ ಹಿರಿಯ ಶಂಕರ್ಬಾಸ್ರಿತ್ತಾಯ, ಜಿ ಮುಹಮ್ಮದ್ ಹನೀಫ್, ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಾಲಾ ಶಿಕ್ಷಕಿ ಸುಧಾ ನಾಗೇಶ್ ಮತ್ತು ಉದ್ಯೋಗ ನಿಮಿತ್ತ ವರ್ಗಾವಣೆಗೊಂಡ ಶಾಲಾ ಸಿಬ್ಬಂದಿ ಯಶೋಮತಿ ಅವರನ್ನು ಸನ್ಮಾನಿಸಲಾಯಿತು.ಶಾಲಾ ಸಂಚಾಲಕ ಡಾ ಪಿ ವಿಶ್ವನಾಥ ನಾಯಕ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಮುಖ್ಯ ಶಿಕ್ಷಕ ಶಿವಪ್ಪ ನಾಯಕ್ ಶಾಲಾ ವಾರ್ಷಿಕ ವರದಿ ವಾಚಿಸಿದರು. ಶಿಕ್ಷಕ ಧನರಾಜ್ ದೊಡ್ಡನೇರಳೆ ವಂದಿಸಿದರು. ಶಿಕ್ಷಕರಾದ ವೀಣಾ, ಅಜಿತ್ ಕುಮಾರ್, ಸುಧಾಕರ ಹಾಗೂ ಸುಧಾ ನಾಗೇಶ್ ಬಹುಮಾನಿತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿಗಳಾದ ಮೋಕ್ಷಿತ್ ಸೂದನ್, ಫಾತಿಮತ್ ಝಾಹಿಫಾ ಹಾಗೂ ತಸ್ಮಿಯಾಬಾನು ಸನ್ಮಾನ ಪತ್ರ ವಾಚಿಸಿದರು. ವಿದ್ಯಾರ್ಥಿನಿ ದೀಕ್ಷಾ ಹಾಗೂ ತಂಡ ಪ್ರಾರ್ಥನೆಗೈದರು. ವಿದ್ಯಾರ್ಥಿ ಅಬ್ದುಲ್ ರಾಝಿಕ್ ಬೋಳಿಯಾರು ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿ, ಮನೋರಂಜಾನ ಕಾರ್ಯಕ್ರಮಗಳು ನಡೆಯಿತು.