ಮಂಗಳೂರು: ಮುಲ್ಕಿಯಲ್ಲಿ ಲಾರಿ ಕಾರು ಡಿಕ್ಕಿ, ಸಹಾಯದ ನೆಪದಲ್ಲಿ ಗಾಯಗೊಂಡಿರುವವರ ಪರ್ಸ್, ಎಟಿಎಂ ಕಳವು

ಮುಲ್ಕಿ: ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಎಂಬಲ್ಲಿ ಲಾರಿ ಹಿಂಬದಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಹೊಸಪೇಟೆ ಕಡೆಗೆ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಕಾರು ಮೂಲ್ಕಿ ರಮಾನಾಥ ಪೈ ಎಂಬುವವರಿಗೆ ಸೇರಿದ್ದು, ಕಾರು ಚಾಲಕ ರೋಹನ್ ಹಾಗೂ ರಮೇಶ್ ದೇವಾಡಿಗ ಎಂಬವರಿಗೆ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನ ಅಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಎದುರು ಭಾಗ ಸಂಪೂರ್ಣ ನಜ್ಜುಗುಜ್ಜು ಆಗಿದೆ. ಅಪಘಾತದ ಬಳಿಕ ಸ್ವಲ್ಪ ಹೊತ್ತಿನಲ್ಲಿ ಕಾರಿನಲ್ಲಿದ್ದ ಪರ್ಸ್ ಹಾಗೂ ಎಟಿಎಂ ಕಾರ್ಡ್ ಕಳವು ಆಗಿದೆ. ಸಹಾಯ ಮಾಡುವ ನೆಪದಲ್ಲಿ ಕಾರಿನಲ್ಲಿದ್ದ ಪರ್ಸ್ ಮತ್ತು ಎಟಿಎಂ ಕಾರ್ಡ್ ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.