ಕಾರ್ಕಳ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿತ
ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿರುವ ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆ ತ್ವೈಬಾ ಗಾರ್ಡನ್ ಮುಖ್ಯಸ್ಥ ಅದಿ ಕಿಲ್ಲೂರು ಓರ್ವ ಬಾಲಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಇದೀಗ ಈ ಬಗ್ಗೆ ಬಾಲಕನ ವಿಡಿಯೋವೊಂದ ವೈರಲ್ ಆಗಿದೆ. ಬಾಲಕನ ಮೈ ಮೇಲೆ ಬರೆ ಬರುವ ರೀತಿಯಲ್ಲಿ ಹೊಡೆಯಲಾಗಿದೆ. ಪುತ್ರನ ಸ್ಥಿತಿ ಕಂಡು ಪೋಷಕರು ಕಣ್ಣೀರು ಹಾಕಿದ್ದಾರೆ.
ಅದಿ ಕಿಲ್ಲೂರು ವಿರುದ್ಧ ಕ್ರಮ ಕೈಗೊಳ್ಳುವಂತೆ ಬಾಲಕನ ಪೋಷಕರು ಅಗ್ರಹಿಸಿದ್ದಾರೆ. ತೀವ್ರ ಆಕ್ರೋಶ ಬೆನ್ನಲ್ಲಿ ಹಲ್ಲೆ ನಡೆಸಿದ ಸಂಸ್ಥೆಯ ಮುಖ್ಯಸ್ಥ ಅದಿ ಕಿಲ್ಲೂರನನ್ನು ವಜಾ ಮಾಡಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆ ಈ ಬಗ್ಗೆ ಪ್ರಕರಣ ದಾಖಲಾಗಿದೆ.