ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದರು. ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಎಸ್ಪಿ ಸಂಸದ ಧರ್ಮೇಂದ್ರ ಯಾದವ್ ಹೇಳಿದ್ದಾರೆ. ಇದೊಂದು ರೀತಿಯಲ್ಲಿ ಸರ್ವಾಧಿಕಾರ ಹೇರುವ ಪ್ರಯತ್ನ. ಆದರೆ, ಬಿಜೆಪಿ ತನ್ನ ಪ್ರಮುಖ ಮಿತ್ರ ಪಕ್ಷವಾದ ಜನತಾದಳ ಯುನೈಟೆಡ್‌ನ ಬೆಂಬಲವನ್ನು ಹೊಂದಿದೆ.

ಜೆಡಿಯು ನಾಯಕ ಸಂಜಯ್ ಕುಮಾರ್ ಝಾ ಅವರು ಈ ಮಸೂದೆ ಅಗತ್ಯ ಎಂದು ಹೇಳಿದ್ದಾರೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸಬೇಕು ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ ಎಂದು ಹೇಳಿದರು. ಪಂಚಾಯಿತಿ ಚುನಾವಣೆಯನ್ನು ಪ್ರತ್ಯೇಕವಾಗಿ ನಡೆಸಬೇಕು.

By suddi9

Leave a Reply

Your email address will not be published. Required fields are marked *