ಬೆಂಗಳೂರು: ಸಿಟಿ ರವಿ ಬಿಡುಗಡೆ ಆದೇಶ ನೀಡಿದ ಹೈಕೋರ್ಟ್
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧದ ಹೇಳಿಕೆ ವಿಚಾರದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿಯನ್ನ ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಆಡಿದ ಅದೊಂದು ಮಾತು ಸಂಘರ್ಷಕ್ಕೆ ಕಾರಣವಾಗಿತ್ತು. ಮಾತಿನಿಂದಲೇ ಆಪತ್ತು ತಂದುಕೊಂಡಿರುವ ಸಿಟಿ ರವಿ ಸದ್ಯ ಅರೆಸ್ಟ್ ಕೂಡ ಆಗಿದ್ದಾರೆ. ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುತ್ತಿದ್ದಾರೆ. ಈ ಮಧ್ಯೆ ಸಿಟಿ ರವಿ ವಿರುದ್ಧ ಮಹಿಳಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ದೂರು ನೀಡಲಾಗಿದೆ.