ಗದಗ: ಮುಖ್ಯ ಶಿಕ್ಷಕಿಯ ಭೀಕರ ಕೊಲೆ
ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ನವನಗರದಲ್ಲಿ ಮುಖ್ಯ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ರೊಟ್ಟಿ ಮಾಡುವ ಕ್ವಾಮನಗಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ. ಹತ್ಯೆ ಆಗಿರುವ ಮುಖ್ಯ ಶಿಕ್ಷಕಿಯನ್ನು ಅನ್ನಪೂರ್ಣ ರಾಠೋಡ್ (54) ಎಂದು ಗುರುತಿಸಲಾಗಿದೆ. ಮುಖ್ಯ ಶಿಕ್ಷಕಿ ಮನೆಯಲ್ಲಿ ಒಂಟಿಯಾಗಿದ್ದಾಗ ಹತ್ಯೆ ಮಾಡಲಾಗಿದೆ.
ಇದೀಗ ಈ ಕೊಲೆ ಪ್ರಕರಣ ಇಡೀ ಗಜೇಂದ್ರಗಡ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ತಲೆಗೆ ರೊಟ್ಟಿ ಮಾಡುವ ಕಟ್ಟಿಗೆಯ ಕ್ವಾಮನಗಿಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.