ವಿಜಯಪುರ: ಶಾಲಾ ಶೈಕ್ಷಣಿಕ ಪ್ರವಾಸದಲ್ಲಿ ವಿದ್ಯಾರ್ಥಿಗಳಿಗೆ ಕಾಣಿಸಿಕೊಂಡ ಆರೋಗ್ಯ ಸಮಸ್ಯೆ, ಓರ್ವ ವಿದ್ಯಾರ್ಥಿನಿ ಸಾವು
ಹೆಗಡಿಹಾಳ ಗ್ರಾಮದ ಸ್ವಾಮಿ ವಿವೇಕಾನಂದ ಫ್ರೌಢ ಶಾಲೆಯ ವಿದ್ಯಾರ್ಥಿಗಳು ಡಿಸೆಂಬರ್ 9 ರಿಂದ ಐದು ದಿನಗಳ ಪ್ರವಾಸಕ್ಕೆ ತೆರಳಿದ್ದರು. ಇದರಲ್ಲಿ 110 ವಿದ್ಯಾರ್ಥಿಗಳಲ್ಲಿ 30 ಕ್ಕೂ ಆಧಿಕ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸಮಸ್ಯೆ ಆಗಿದೆ. ಈ ಪೈಕಿ ಇಂದು ಚಿಕಿತ್ಸೆ ಫಲಕಾರಿಯಾಗದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಶಂಕ್ರಮ್ಮ ಮಲ್ಲನಗೌಡ ಬಿರಾದಾರ (15) ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ.
ದಕ್ಷಿಣ ಕರ್ನಾಟಕ ಭಾಗದ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ತೆರಳಿದ್ದರು. ಪ್ರವಾಸದ ವೇಳೆ ಉಪಹಾರ ಊಟ ಹಾಗೂ ವಸತಿ ಸರಿಯಾಗಿ ನೀಡಿಲ್ಲ ಎಂಬ ಆರೋಪ ಕೂಡ ಇತ್ತು. ಪ್ರವಾಸದ ಬಳಿಕ ಚಳಿ ಜ್ವರ ನೆಗಡಿ ಕೆಮ್ಮು ಕಫದಿಂದ ಬಳಲಿದ ವಿದ್ಯಾರ್ಥಿಗಳು, ಮೂವರು ಶಿಕ್ಷಕರು, ಓರ್ವ ಸಹಾಯಕ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿದ್ದರು.
ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ ಶಿಕ್ಷಕರಿಂದ ವಿದ್ಯಾರ್ಥಿಗಳ ನಿರ್ಲಕ್ಷ್ಯ ಮಾಡಿದರೆ ಎಂದು ಹೇಳಲಾಗಿದೆ. ಚಳಿ ಹೆಚ್ಚಿದ್ದರೂ ಸರಿಯಾಗಿ ವಿದ್ಯಾರ್ಥಿಗಳಿಗೆ ಊಟೋಪಚಾರ ವಸತಿಗೆ ವ್ಯವಸ್ಥೆ ಮಾಡಿಲ್ಲ. ಇದೇ ಕಾರಣದಿಂದ ನಮ್ಮ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆಯಾಗಿದೆ. ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶಂಕ್ರಮ್ಮ ಬಿರಾದಾರ ಸಾವಿಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ.