ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಶಾಲಾ ಕ್ರೀಡೋತ್ಸವ ಕಾರ್ಯಕ್ರಮ ನಡೆಯಿತು.

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಶಾಲಾ ಕ್ರೀಡೋತ್ಸವ ಕಾರ್ಯಕ್ರಮ ನಡೆಯಿತು.ಈ ವೇಳೆ ಪ್ರೌಢಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶೇಖರ್ ಅಂಚನ್ ಅವರು ಪಥಸಂಚಲನದ ಗೌರವ ವಂದನೆಯನ್ನು ಸ್ವೀಕರಿಸಿದರು.ಶ್ರೀ ದುರ್ಗಾ ಚಾರಿಟೇಬಲ್ ಅಧ್ಯಕ್ಷರಾದ ಪ್ರಕಾಶ್ ಅಂಚನ್ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯ ಮೂಲಕ ಕ್ರೀಡಾಂಗಣಕ್ಕೆ ಆಗಮಿಸಿದರು. ಕ್ರೀಡಾ ಜ್ಯೋತಿಯನ್ನು ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಮಚಂದ್ರ ಕರೆಂಕಿ ಸ್ವೀಕರಿಸಿದರು.
ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಗೌತಮ್ ರವರನ್ನು ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಹಾಗೂ ಶಾಲಾ ಎಸ್ ಡಿ ಎಂಸಿ ವತಿಯಿಂದ ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ರಮಾನಂದ ಹಾಗೂ ಪ್ರಾಥಮಿಕ ಶಾಲಾ ಮುಖ್ಯಸ್ಥೆ ಯಾವ ವಿನ್ನಿ ಸಿಂಥಿಯಾ, ಎಸ್ ಡಿ ಎಂ ಸಿ ಸದಸ್ಯರು, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ದೈಹಿಕ ಶಿಕ್ಷಕಿ ವಿನಯ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.