ಕೋಲಾರ: ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ ಯುವತಿ ಆಯ್ಕೆ

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ ಯುವತಿ ಆಯ್ಕೆಯಾಗಿದ್ದಾರೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ದೇಶದ ಗಮನ ಸೆಳೆಯುವ ಗಣರಾಜ್ಯೋತ್ಸವ ಫೆರೆಡ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಗಾಯಕಿ, ಎನ್‌ಸಿಸಿ ಕೆಡೆಟ್ ಕೆ.ಎಂ.ಶ್ರುತಿ ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಶಿಬಿರದಲ್ಲಿ ಮುಖ್ಯ ಗಾಯಕಿಯಾಗಿ ಶ್ರುತಿ ಅವರು ಹಾಡಲಿದ್ದಾರೆ.
ಶ್ರುತಿ ಎನ್‌ಸಿಸಿ ಬೆಂಗಳೂರು ಗ್ರೂಪ್ ‘ಎ’ನಿಂದ ಆಯ್ಕೆಯಾಗಿದ್ದು, ಇವರು ಕರ್ನಾಟಕ ಗೋವಾ ಎನ್‌ಸಿಸಿ ನಿರ್ದೇಶನಾಲಯವನ್ನು ಪ್ರತಿನಿಧಿಸಲಿದ್ದಾರೆ.ಸಂಗೀತ ಶಿಕ್ಷಕಿಯಾಗಿರುವ ಕೆ.ಎಂ.ಶ್ರುತಿ ಅವರು ಎನ್.ಮಹದೇವ್ ಹಾಗೂ ಸಿ.ಎನ್.ಕಸ್ತೂರಿ ಅವರ ಜೇಷ್ಠ ಪುತ್ರಿ. ಸದ್ಯ ಬೆಂಗಳೂರಿನ ನಾಗರಬಾವಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಇನ್ಸ್ಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಬಿ.ಇ. ಐದನೇ ಸೆಮಿಸ್ಟರ್ ಓದುತ್ತಿದ್ದಾರೆ.
ಎನ್‌ಸಿಸಿ ಕೆಡೆಟ್ ಆಗಿರುವ ಶ್ರುತಿ ಅವರು ಪ್ರೌಢ ಶಿಕ್ಷಣವನ್ನು ಕೋಲಾರದ ಸುವರ್ಣ ಸೆಂಟ್ರಲ್ ಶಾಲೆಯಲ್ಲಿ ಪೂರ್ಣಗೊಳಿಸಿ, ವಿದ್ಯಾಜ್ಯೋತಿ ಶಾಲೆಯಲ್ಲಿ ಪಿಯುಸಿ ವ್ಯಾಸಾಂಗ ಮಾಡಿದ್ದಾರೆ. ಸದ್ಯ ಬೆಂಗಳೂರಿನ ಅಂಬೇಡ್ಕರ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಾರೆ.