ಬಂಟ್ವಾಳ: ಶ್ರೀ ಓಂಕಾರೇಶ್ವರೀ ಭಜನಾ ಮಂದಿರದ ವಾರ್ಷಿಕೋತ್ಸವ ವೈಭವ
ಬಂಟ್ವಾಳ: ಕುರಿಯಾಳ ಗ್ರಾಮದ ದುರ್ಗಾನಗರ ಶ್ರೀ ಓಂಕಾರೇಶ್ವರೀ ಭಜನಾ ಮಂದಿರದ ವಾರ್ಷಿಕೋತ್ಸವ ವೈಭವದಿಂದ ನಡೆಯಿತು. ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ಜರಗಿತು.
ಅರ್ಚಕ ಸುದರ್ಶನ್ ಬಲ್ಲಾಳ್ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ನಾಗದೇವರಿಗೆ ನಾಗತಂಬಿಲ, ಆಶ್ಲೇಷ ಬಲಿ, ಮಹಾಪೂಜೆ ನಡೆಯಿತು. ಮಧ್ಯಾಹ್ನ ಶ್ರೀ ಓಂಕಾರೇಶ್ವರೀ ದೇವಿಗೆ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು.
ಬಳಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ಭಜನಾ ಮಂಗಳ, ರಾತ್ರಿ ಶ್ರೀ ಓಂಕಾರೇಶ್ವರೀ ದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು ಹಾಗೂ ರಾಮ ಧರ್ಮ ಶಿಕ್ಷಣದ ಮನೋಹರ್ ಕಲ್ಲಡ್ಕ ಅವರನ್ನು ಗೌರವಿಸಲಾಯಿತು. ರಾತ್ರಿ ಸಸಿಹಿತ್ಲು ಮೇಳದಿಂದ ಮಹಾಶಕ್ತಿ ಮಂತ್ರದೇವತೆ ಯಕ್ಷಗಾನ ಬಯಲಾಟ ನಡೆಯಿತು.