ಬಂಟ್ವಾಳ: ಜ.4ರಂದು ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ
ಬಂಟ್ವಾಳ: ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಮಹಿಷಮರ್ದಿನಿ ಕಂಬಳ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ ಜ.4ರಂದು ನಡೆಯಲಿದೆ. ಅಂದು ಬೆಳಗ್ಗೆ ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಅವರು ಆಶೀರ್ವಚನ ನೀಡಲಿದ್ದಾರೆ. ಮೂಡುಬಿದಿರೆ ಚೌಟರ ಅರಮನೆ ಕುಲದೀಪ ಚೌಟ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಾಗೂ ಮತ್ತಿತರ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಬೆಳ್ತಂಗಡಿ ಶಾಸಕ ಹರೀಶ ಪೂಂಜ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಮಾಜಿ ಉಪ ಮುಖ್ಯ ಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಸಂಸದ ಕ್ಯಾ, ಬೃಜೇಶ್ ಚೌಟ, ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್, ಮಾಜಿ ಸಂಸದರಾದ ಸಂಸದ ನಳಿನ್ ಕುಮಾರ್ ಕಟೀಲು, ಪ್ರತಾಪ ಸಿಂಹ, ಶಾಸಕರಾದ ಉಮಾನಾಥ ಕೋಟ್ಯಾನ್, ಅಶೋಕ್ ಕುಮಾರ್ ರೈ, ಯಶ್‌ಪಾಲ್ ಸುವರ್ಣ, ಎಸ್.ಎಲ್ ಭೋಜೇ ಗೌಡ, ಕಿಶೋರ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾತ ರೈ, ಬಿ.ನಾಗರಾಜ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್, ಮತ್ತಿತರ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಅವರು ಅಧ್ಯಕ್ಷತೆ ವಹಿಸಲಿದ್ದು, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲ್‌ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ತಿಳಿಸಿದ್ದಾರೆ.