ಬಂಟ್ವಾಳ: ಮಜಿ ವೀರಕಂಭ ಇಲ್ಲಿನ ಯುವಶಕ್ತಿ ಸೇವಾ ಪಥ ದ.ಕ ವತಿಯಿಂದ ಶಾಲೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ
ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಜಿ ವೀರಕಂಭ ಇಲ್ಲಿನ ಯುವಶಕ್ತಿ ಸೇವಾ ಪಥ ದ.ಕ ವತಿಯಿಂದ ನೀಡಿದ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ, ಭಾಗವಹಿಸಿದ, ವೀರಕಂಭ ಮಜಿ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಈಶರ ಭಟ್ಟ ರಾಕೋಡಿ ಇಂದಿನ ಯುವಕರು ಭಾರತದ ಭವ್ಯತೆಯನ್ನು ಹೆಚ್ಚಿಸಿ ದೇಶದ ಅಡಿಪಾಯವನ್ನು ಗಟ್ಟಿ ಮಾಡುವ ಛಲವನ್ನು ಹೊಂದಿರಬೇಕು, ಸಮಾಜದ ಒಳಿತಿಗಾಗಿ ನಿರಂತರವಾಗಿ ಕಾಳಜಿಯನ್ನು ಹೊಂದಿದ ಸಂಘಟನೆಯು ದೇಶದ ಶಕ್ತಿ ಎಂದು ಹೇಳಿದರು.
ನಿಸ್ವಾರ್ಥ ಸೇವೆಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಅದಕ್ಕೆ ತಕ್ಕನಾದ ಫಲವು ದೊರಕುತ್ತದೆ, ಹಲವು ಸಮಾಜಮುಖಿ ಕೆಲಸಗಳ ಮೂಲಕ ಗುರುತಿಸಿಕೊಂಡ ಈ ಸಂಸ್ಥೆಯು ಆಶಾಕಿರಣವಾಗಿದೆ ಎಂದರು.
ಸಂಘದ ಸದಸ್ಯರು ತಮ್ಮ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ, ಮುಂತಾದ ವಿಶೇಷ ಕಾರ್ಯಕ್ರಮಗಳ ನಿಮಿತ್ತ ಸಂಘಕ್ಕೆ ನೀಡಿದ ಗೌರವಧನವನ್ನು ಒಟ್ಟು ಸೇರಿಸಿ “ಶುಭನಿಧಿ ಸೇವಾಭಿಯಾನ’ ಎಂಬ ಕಾರ್ಯಕ್ರಮದಡಿಯಲ್ಲಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಗಿದೆ ಎಂದು ಸಂಚಾಲಕರಾದ ವಿಜೇತ್ ಶೆಟ್ಟಿ ಕಡೇಶಿವಾಲಯ ಅವರು ತಿಳಿಸಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ಸಂಘಟನೆಯ ಸಮಾಜಮುಖಿ ಕೆಲಸಗಳನ್ನು ಗುರುತಿಸಿ ಶಾಲಾ ವತಿಯಿಂದ ಅಭಿನಂದಿಸಲಾಯಿತು.
ಮಾತೃಸಂಸ್ಥೆ ಯುವಶಕ್ತಿ ಕಡೇಶಿವಾಲಯ ಇದರ ಅಧ್ಯಕ್ಷರಾದ ದೇವಿಪ್ರಸಾದ್ ಬೇಂಗದಡಿ,ಗೋಳ್ತಮಜಲು ಓಂ ಸಾಯಿ ಗಣೇಶ್ ಸೇವಾ ಟ್ರಸ್ಟ್ ನ ರಾಮಚಂದ್ರ ಸಾಲಿಯಾನ್, ತಿಲಕ್ ಗೋಳ್ತಮಜಲು, ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಪತ್ರಕರ್ತ ಮೌನೇಶ್ ವಿಶ್ವಕರ್ಮ, ಶಾಲಾ ಹಿರಿಯ ವಿದ್ಯಾರ್ಥಿ ಉಮೇಶ್ ಸುವರ್ಣ, ಸೇವಾಪಥದ ಪ್ರಮುಖರುಮೊದಲಾದವರು ಉಪಸ್ಥಿತರಿದ್ದರು.
ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಯುವಶಕ್ತಿ ಸೇವಾ ಪಥ ಇದರ ಸದಸ್ಯರು, ಓಂ ಶ್ರೀ ಸಾಯಿ ಗಣೇಶ್ ಸೇವಾ ಟ್ರಸ್ಟ್ ಸದಸ್ಯರು, ಹಿರಿಯ ವಿದ್ಯಾರ್ಥಿಗಳು,ಶಾಲಾ ಶಿಕ್ಷಕರು, ಶಾಲಾ ಮಕ್ಕಳು, ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಬೆನಡಿಟ್ಟ ಆಗ್ನೇಸ್ ಮಂಡೋನ್ಸ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕ ಇಂದು ಶೇಖರ್ ಕುಲಾಲ್ ವಂದಿಸಿದರು. ಸಹ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರೂಪಿಸಿದರು.