ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನ ಕುಪ್ಪೆಟ್ಟು ಬರ್ಕೆ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಪತ್ರ ಬಿಡುಗಡೆ
ಬಂಟ್ವಳ: ದಕ್ಷಿಣ ಕನ್ನಡ ಹಾಗೂ ಉಡುಪಿ ಜೆಲ್ಲೆಯ ಸಾವಿರಾರು ಮನೆಗಳಲ್ಲಿ ಆರಾಧಿಸಿಕೊಂಡು ಬಂದಿರುವ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನದ ದೈವಗಳ ಪ್ರತಿಷ್ಠಾ ಮಹೋತ್ಸವವು 2025 ಫೆ. 18 ರಿಂದ 22 ರವರೆಗೆ ಜರಗಲಿದ್ದು, ಇದರ ಆಮಂತ್ರಣ ಪತ್ರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ವಾರು ಬಿಡುಗಡೆಗೊಳಿಸಿದರು.

ಸಿದ್ದಕಟ್ಟೆ ನಾರಾಯಣಗುರು ಮಂದಿರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತಾನಾಡಿದ ಶಾಸಕರು ಸುಮಾರು 400-500 ವರ್ಷಗಳ ಇತಿಹಾಸ ವಿರುವ ಕುಪ್ಪೆಟ್ಟು ಪಂಜುರ್ಲಿ ಮೂಲ ಸ್ಥಾನವು ಭಕ್ತರೆಲ್ಲರ ಆಶಯದಂತೆ ದೈವಾನುಗ್ರಹದಿಂದ ಜೀರ್ಣೋದ್ದಾರ ಗೊಂಡು ಪ್ರತಿಷ್ಠಾ ಮಹೋತ್ಸವ ಜರಗಲಿರುವುದು ಇಡೀ ತುಳುನಾಡಿಗೆ ಐತಿಹಾಸಿಕ ಕ್ಷಣವಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಬಾಗವಹಿಸಿದ್ದ ಗೀತಾಂಜಲಿ ಸುವರ್ಣ ಮಾತನಾಡಿ, ಕುಪ್ಪೆಟ್ಟು ಪಂಜುರ್ಲಿ ಮೂಲ ಸ್ಥಾನಕ್ಕೂ ನಮ್ಮ ಕುಟುಂಬಕ್ಕೂ ನಿಕಟ ಸಂಬಂಧವಿದ್ದು,ಈ ಕೇತ್ರವು ಅಭಿವೃದ್ಧಿಗೊಳ್ಳುತ್ತಿರುವುದು ಸ್ತುತ್ಯಾರ್ಹವಾಗಿದೆ ಎಂದರು.
ಕುಪ್ಪೆಟ್ಟು ಪಂಜುರ್ಲಿ ದೈವವು ಕರಾವಳಿ ಜಿಲ್ಲೆಯಲ್ಲಿ ಸುಮಾರು 5000 ಮನೆಗಳಲ್ಲಿ ಆರಾಧಿಸಿಕೊಂಡು ಬರುತ್ತಿರುವುದು ಸಮೀಕ್ಷೆಯಿಂದ ತಿಳಿದು ಬಂದಿದ್ದು ಆರಾಧನೆ ಮಾಡಿಕೊಂಡು ಬರುತ್ತಿರುವ ಎಲ್ಲಾ ಭಕ್ತ ಸಮೂಹದ ಜನರು ಮೂಲ ಸ್ಥಾನಕ್ಕೆ ಭೇಟಿ ನೀಡಿ ದೈವಗಳ ಗಂಧ ಪ್ರಸಾದ ಪಡೆದುಕೊಂಡು ಪುನೀತ ರಾಗಬೇಕು ಎಂದರು.
ವೇದಿಕೆಯಲ್ಲಿ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಆಡಳಿತ ಸಮಿತಿ ಅಧ್ಯಕ್ಷ ಹರೀಶ್ ಸನೀಲ್ ಕುಪ್ಪೆಟ್ಟು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಭಾಕರ ಪ್ರಭು, ಹೊರೆಕಾಣಿಕೆ ಸಮಿತಿ ಸಂಚಾಲಕ ದೇವಪ್ಪ ಕರ್ಕೇರ ಉಪಸ್ಥಿತರಿದ್ದರು.
ಪ್ರಚಾರ ಸಮಿತಿ ಸಂಚಾಲಕ ದಿನೇಶ್ ಪ್ರಸ್ತಾವಿಸಿ, ಕಾರ್ಯಕ್ರಮ ನಿರೂಪಿಸಿದರು