ಬಂಟ್ವಾಳ: ಮಂಗಳೂರಿನ ಕದ್ರಿ ಪಾಕ್‌ ೯ನಲ್ಲಿ ಶರಧಿ ಪ್ರತಿಷ್ಠಾನವು ಕರ್ನಾಟಕ ರಾಜ್ಯ ಸರ್ಕಾರದ ಸಹಯೋಗದಲ್ಲಿ ಆಯೋಜಿಸಿದ ‘ಕಲಾ ಪರ್ವ” ಚಿತ್ರಕಲಾ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ 4ನೇ ತರಗತಿಯ ನಿಹಾರಿಕ ಪ್ರಥಮ ಸ್ಥಾನ ಪಡೆದಿದ್ದಾಳೆ.

ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರು ಈಕೆಗೆ ಒಂದು ಗ್ರಾಂ. ಚಿನ್ನದ ಪದಕ, ಗಿಪ್ಟ್ ವೊಚರ್ ಹಾಗೂ ಪ್ರಶಸ್ತಿ ಪತ್ರವನ್ನು ವಿತರಿಸಿದರು. ಇವರನ್ನು ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಸಂಚಾಲಕರು, ಮುಖ್ಯೋಪಾಧ್ಯಾಯರು, ಬೋಧಕರು ಹಾಗೂ ಬೋಧಕೇತರರು ಅಭಿನಂದಿಸಿದರು.

By suddi9

Leave a Reply

Your email address will not be published. Required fields are marked *