ಮಹಿಳಾ ದೌರ್ಜನ್ಯ ಹಾಗೂ ಬಾಲ್ಯ ವಿವಾಹದ ಮಾಹಿತಿ ಕಾರ್ಯಾಗಾರ
ಬಂಟ್ವಾಳ :ತಾಲೂಕಿನ ತುಂಬೆ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಗ್ರಾಮ ಸಭೆಯು ಪಂಚಾಯತ್ ಸಭಾಂಗಣ ದಲ್ಲಿ ನಡೆಸಲಾಯಿತು.ಅಂಗನವಾಡಿ ಕಾರ್ಯಕರ್ತೆ ವಿಜಯ ವಾಣಿ ಅವರು ಮಹಿಳಾ ದೌರ್ಜನ್ಯ ಹಾಗೂ ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ,ಪಂಚಾಯತ್ ಅಧ್ಯಕ್ಷೆ ಜಯಂತಿ ಕೇಶವ, ಉಪಧ್ಯಾಕ್ಷರಾದ ಗಣೇಶ್ ಸಾಲಿಯಾನ್, ನಿಕಟ ಪೂರ್ವ ಅಧ್ಯಕ್ಷ ಪ್ರವೀಣ್ ಬಿ ತುಂಬೆ, ಪಂಚಾಯತ್
ಸದಸ್ಯರಾದ ಜಯಂತಿ ಶ್ರೀಧರ, ಜಯಂತಿ ನಾಗೇಶ್ ,ಆತಿಕಾಬಾನು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶಿವುಲಾಲ್ ಚವ್ಹಾನ್ , ದ ಲೆಕ್ಕ ಸಹಾಯಕರಾದ ಚಂದ್ರಕಲಾ.ಜಿ ,ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ,ಆಶಾ ಕಾರ್ಯಕರ್ತೆಯರು,ಸಂಜೀವಿನಿ ಒಕ್ಕೂಟದ ಪಧಾದಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದರು.