ಬಂಟ್ವಾಳ:ಯುವವಾಹಿನಿ ಬಂಟ್ವಾಳ ಘಟಕವು ಕೋಟಿ ಚೆನ್ನಯ ಕ್ರೀಡೋತ್ಸವದ ಐತಿಹಾಸಿಕ ಕಾರ್ಯಕ್ರಮದಲ್ಲಿ ಜನತೆಗೆ ಸ್ಪಂದಿಸುವ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೊಂದಣಿಯಂತಹ ಸಮಾಜಮುಖಿ ಕಾರ್ಯ ಆಯೋಜಿಸಿರುವುದು ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷೆ ವಿದ್ಯಾ ರಾಕೇಶ್ ತಿಳಿಸಿದರು.

ಬಂಟ್ವಾಳದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ
ಅಂಚೆ ಜನ ಸಂಪರ್ಕ ಅಭಿಯಾನ ಶಿಬಿರ
ವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು
ಯುವವಾಹಿನಿ ಬಂಟ್ವಾಳ ಘಟಕದ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಿಬಿರದಲ್ಲಿ ಒಟ್ಟು 424 ಮಂದಿ ಆಧಾರ್ ತಿದ್ದುಪಡಿ ನೊಂದಣಿ ಹಾಗೂ ಅಂಚೆ ಇಲಾಖೆಯ ವಿಮಾ ಸೌಲಭ್ಯಗಳ ಪ್ರಯೋಜನ ಪಡೆದರು.
