Published On: Fri, Jan 24th, 2025

ಮಳೆ ನೀರು ಕೊಯ್ಲು, ಸೌರಶಕ್ತಿ ಹಾಗೂ ಘನ ತ್ಯಾಜ್ಯ ನಿರ್ವಹಣೆ ಮಾಹಿತಿ ಕಾರ್ಯಕ್ರಮ

ಬಂಟ್ವಾಳ :ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಹಾಗೂ ಅಭಿವೃದ್ಧಿ ಸಂಸ್ಥೆ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ,ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಮತ್ತು ಡೇ ಎನ್ ಆರ್ ಎಲ್ ಎಂ ಬಂಟ್ವಾಳ ಇವರ ಸಹಯೋಗದಲ್ಲಿ ಮಳೆನೀರು ಕೊಯ್ಲು, ಸೌರಶಕ್ತಿ ಹಾಗೂ ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್ ಜಿಎಸ್ ವೈ ಸಭಾಂಗಣದಲ್ಲಿ  ಗುರುವಾರ ನಡೆಯಿತು.


ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ  ಸಚಿನ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಡಿ “ಇಂತಹ ಮಾಹಿತಿ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶಕ್ಕೆ ಅಗತ್ಯವಾಗಿದ್ದು , ಮಳೆನೀರು ಕೊಯ್ಲು ಹಾಗೂ ಸೌರ ಶಕ್ತಿ ಅಳವಡಿಕೆಯಲ್ಲಿ ಸರ್ವರಿಗೂ ಮಾದರಿಯಾಗೋಣ ಎಂದು ತಿಳಿಸಿದರು.
ಡೇ ಎನ್ ಆರ್ ಎಲ್ ಎಂ ನ ಜಿಲ್ಲಾ ವ್ಯವಸ್ತಾಪಕಾರದ ಹರಿಪ್ರಸಾದ್ ಮಾಹಿತಿ ಕಾರ್ಯಕ್ರಮದ ಅಗತ್ಯತೆ ಹಾಗೂ ಮಹಿಳೆಯರ ಭಾಗವಹಿಸುವಿಕೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಬೆಂಗಳೂರು ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಹಾಗೂ ಅಭಿವೃದ್ಧಿ ಸಂಸ್ಥೆಯ ಅಧಿಕಾರಿ  ರವಿ ಕುಮಾರ್ ಮಳೆನೀರು ಕೊಯ್ಲು ಬಗ್ಗೆ, ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್  ಅಧಿಕಾರಿ  ಜೀವನ್  ಕೊಲ್ಯ,ಘನ ತ್ಯಾಜ್ಯ ನಿರ್ವಹಣೆ ಬಗ್ಗೆ, ಸೆಲ್ಕೋ ಸಂಸ್ಥೆಯ ಅಧಿಕಾರಿ  ರವೀಣಾ ಸೌರ ಶಕ್ತಿ ಜೀವನೋಪಾಯ ಯಂತ್ರಗಳ ಬಗ್ಗೆ ಮಾಹಿತಿ ನೀಡಿದರು. ಎನ್ ಆರ್ ಎಲ್ ಎಂ ನ ಬಂಟ್ವಾಳ ತಾಲೂಕು  ವ್ಯವಸ್ಥಾಪಕ ಪ್ರದೀಪ್ ಕಾಮತ್  ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕಿ ಕುಸುಮ ಕಾರ್ಯಕ್ರಮ ನಿರೂಪಿಸಿದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter