Published On: Mon, Jan 27th, 2025

ಉಡುಪಿ: ಶಾರದಾ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ

ಉಡುಪಿಯ ಶಾರದಾ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದೀಗ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್​ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಶಾಲೆಯ ಮೂಲೆ ಮೂಲೆಯಲ್ಲೂ ಹುಡುಕಾಟ ನಡೆಸಿದ್ದಾರೆ. ಇನ್ನು, ಬಾಂಬ್​ ಬೆದರಿಕೆ ಸಂದೇಶ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂಭಾಗ ಜಮಾಯಿಸಿದ್ದಾರೆ. ಇನ್ನು, ಶಾರದಾ ಶಾಲೆಯಲ್ಲಿ ರಾಜ್ಯದ ನಾನಾ ಭಾಗದ ಹಾಗೂ ಅಂತರರಾಜ್ಯದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕರ್ನಾಟಕದ ಅನೇಕ ಕಡೆ ಇಂತಹ ಬಾಂಬ್​​ ಬೆದರಿಕೆಗಳು ಬಂದಿದೆ. ಅದರಲ್ಲೂ ಶಾಲೆಗಳಿಗೆ ಹೆಚ್ಚು. ಇದರಿಂದ ಮಕ್ಕಳು ಹಾಗೂ ವಿದ್ಯಾರ್ಥಿಗಳ ಪೋಷಕರು ಕೂಡ ಇದರಿಂದ ಭಯಭೀತಿಗೊಂಡಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter