ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ.

ಇನ್ನುಮುಂದೆ ಯಾವುದೇ ಬಗೆಯ ವಾಹನಗಳನ್ನು ಒಳಗೆ ಬಿಡುವುದಿಲ್ಲ. ಮೌನಿ ಅಮಾವಾಸ್ಯೆಯಂದು ಕಾಲ್ತುಳಿತದಲ್ಲಿ 30 ಭಕ್ತರು ಸಾವನ್ನಪ್ಪಿದರೆ, 60 ಭಕ್ತರು ಗಾಯಗೊಂಡಿದ್ದಾರೆ. ಸಂಪೂರ್ಣ ವಾಹನ ರಹಿತ ವಲಯವಾಗಿದ್ದು, ಎಲ್ಲಾ ರೀತಿಯ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ವಿವಿಐಪಿ ಪಾಸ್‌ಗಳನ್ನು ರದ್ದುಗೊಳಿಸಲಾಗಿದೆ- ಯಾವುದೇ ವಿಶೇಷ ಪಾಸ್ ಮೂಲಕ ವಾಹನಗಳಿಗೆ ಪ್ರವೇಶವನ್ನು ಅನುಮತಿಸಲಾಗುವುದಿಲ್ಲ. ರಸ್ತೆಗಳು ಏಕಮುಖ – ಭಕ್ತರ ಸುಗಮ ಸಂಚಾರಕ್ಕಾಗಿ ಏಕಮುಖ ರಸ್ತೆ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಕುಂಭ ಪ್ರದೇಶದಲ್ಲಿ ಜನಸಂದಣಿಯನ್ನು ನಿಯಂತ್ರಿಸುವುದು ಮತ್ತು ಭಕ್ತರ ಸುರಕ್ಷತೆಯನ್ನು ಖಚಿತಪಡಿಸುವುದು ಈ ಬದಲಾವಣೆಗಳ ಉದ್ದೇಶವಾಗಿದೆ. ಭಕ್ತರು ಆಡಳಿತದ ಸೂಚನೆಗಳನ್ನು ಪಾಲಿಸಿ ಯಾವುದೇ ರೀತಿಯ ಅವ್ಯವಸ್ಥೆ ಆಗದಂತೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

By Suddi9

Leave a Reply

Your email address will not be published. Required fields are marked *