ಪ್ರಯಾಗ್ರಾಜ್: ಮಹಾ ಕುಂಭ ಪ್ರದೇಶದಲ್ಲಿ ಭಾರೀ ಸ್ಫೋಟ

ಪ್ರಯಾಗ್ರಾಜ್ ಜಿಲ್ಲೆಯ ಮಹಾ ಕುಂಭ ಪ್ರದೇಶದ ಸೆಕ್ಟರ್ 22 ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿದೆ. ಸದ್ಯಕ್ಕೆ ಯಾವುದೇ ಗಾಯಗಳು ಅಥವಾ ಸಾವು ನೋವುಗಳ ವರದಿಯಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಬೆಂಕಿ ಸಂಭವಿಸಿದಾಗ ಜನರು ಟೆಂಟ್ ಪ್ರದೇಶದಲ್ಲಿ ಇರಲಿಲ್ಲ ಎಂದು ವರದಿಗಳು ಹೇಳಿದೆ.