ರಾಯಚೂರು: ಎಂಎಸ್ಸಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರ ಹತ್ಯೆ

ರಾಯಚೂರು ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ಎಂಎಸ್ಸಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಲಾಗಿದೆ. ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಶಿಫಾ (22) ಮೃತ ವಿದ್ಯಾರ್ಥಿನಿ. ಹಾಡಹಗಲೇ ನಡುರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮುಬಿನ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲಿಂಗಸುಗೂರಿನ ನಿವಾಸಿಯಾಗಿರುವ ಶಿಫಾಳನ್ನು ಪರಿಚಯಸ್ಥರೇ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಸಿಂಧನೂರು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.