ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ರಕ್ತವನ್ನು ಸ್ನೇಹಮಯಿ ಕೃಷ್ಣ ಗಂಗರಾಜು ಫೋಟೋಗೆ ಹಚ್ಚಿರುವ ವಿಡಿಯೋ ವೈರಲ್

ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್ಟಿಐ ಕಾರ್ಯಕರ್ತ ಗಂಗರಾಜು ಫೋಟೋಗೆ ಹಚ್ಚಿರುವ ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ಸರಣಿ ಪ್ರಾಣಿ ಬಲಿ ಮಾಡಿರುವ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜುಗೆ ಶಕ್ತಿ ತುಂಬಲು ಈ ರೀತಿ ಮಾಡುತ್ತಿದ್ದರು ಎನ್ನಲಾಗಿದೆ.ಮಸಾಜ್ ಪರ್ಲಾರ್ ಗಲಾಟೆಯಲ್ಲಿ ಬಂಧನವಾಗಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ಪರಿಶೀಲಿಸಿದಾಗ ಸ್ಫೋಟಕ ಅಂಶ ಪೊಲೀಸರ ಮುಂದೆ ಹೇಳಿದ್ದಾರೆ.
ಈ ವಿಚಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣತಿಯಂತೆ ಕದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ದೂರು ನೀಡಿದ್ದು, ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಮದ್ಯರಾತ್ರಿ 1.30ಕ್ಕೆ ಎಫ್ಐಆರ್ ದಾಖಲಾಗಿದೆ.