ಬಂಟ್ವಾಳ ತಾ.ಪಂ.ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಭೇಟಿ
ಬಂಟ್ವಾಳ: ದ.ಕ. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಜಯಲಕ್ಷ್ಮೀ ಕೆಎಎಸ್ ಅವರು ಬಂಟ್ವಾಳ ತಾಲೂಕು ಪಂಚಾಯಿತಿಗೆ ಭೇಟಿ ನೀಡಿ ತಾಲೂಕು ಪಂಚಾಯತ್ ನ ಸಾಮರ್ಥ್ಯ ಸೌಧದಲ್ಲಿ ನಡೆಯುತ್ತಿರುವ ತರಬೇತಿಗೆ ಭೇಟಿ ನೀಡಿ ಶಿಬಿರಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಬಳಿಕ ತಾಲೂಕು ಪಂಚಾಯತ್ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ.(, ಸಹಾಯಕ ನಿರ್ದೇಶಕರಾದ ವಿಜಯ್ ಶಂಕರ್ ಆಳ್ವ , ತರಬೇತುದಾರರು, ಎಸ್‌ಬಿಎಂ ಜಿಲ್ಲಾ ಸಮಾಲೋಚಕರಾದ ನವೀನ್, ಪವನ್ ಶೆಟ್ಟಿ ಇತರರು ಉಪಸ್ಥಿತರಿದ್ದರು.