ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ತೆರಳಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಯಶ್ವಂತ್ ಸಿಂಗ್ ಆಲಿಯಾಸ್ ಗಣೇಶ್(29), ರೋಹಿತ್ (28) ಮೃತರು ಎಂದು ಗುರುತಿಸಲಾಗಿದೆ. ಯಶ್ವಂತ್ ಸಿಂಗ್ ಆಲಿಯಾಸ್ ಗಣೇಶ್ ಮತ್ತು ರೋಹಿತ್ ರಾಜಸ್ತಾನ ಮೂಲದವರು. ಭಾನುವಾರ ರಜೆ ಹಿನ್ನೆಲೆಯಲ್ಲಿ ಮದ್ಯಾಹ್ನ ಕೆಲಸ ಮುಗಿಸಿ ಈಜಲು ಜಿನ್ನಾಪುರ ಕೆರೆಗೆ ಹೋಗಿದ್ದಾರೆ. ಇದರ ಇಬ್ಬರಿಗೆ ಈಜಲು ಗೊತ್ತಿತ್ತು. ರೋಹಿತ್ ಈಜುವ ವೇಳೆ ಕೆರೆಯ ಗಿಡಗಂಟಿಗಳ ನಡುವೆ ಸಿಲುಕಿದ್ದಾರೆ. ಮೇಲೆ‌ ಬರಲಾಗದೆ ಕಾಪಾಡಿ‌ ಕಾಪಾಡಿ‌ ಎಂದು ಕೂಗಾಡಿದ್ದಾರೆ. ತಕ್ಷಣ ಕೆರೆಗೆ ಜಿಗಿದ ಗಣೇಶ್ ಕೂಡ ಅಲ್ಲಿನ‌ ಕೆಸರು ಹಾಗೂ ಬಳ್ಳಿಗಳ ನಡುವೆ ಸಿಲುಕಿದ್ದಾರೆ. ಮೇಲೆ ಬರಲು ಏನೆಲ್ಲ ಪ್ರಯತ್ನ ಪಟ್ಟರೂ ಸಾದ್ಯವಾಗದೆ ಇಬ್ಬರು ಗೆಳೆಯರು ಒಟ್ಟಿಗೆ ಮುಳುಗಿದ್ದಾರೆ.

ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಮನೆಯವರು ಹುಡುಕುತ್ತಾ ಕೆರೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಸಮೀಪದ ಶ್ರವಣಬೆಳಗೊಳ‌ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಮೃತದೇಹ ಹೊರತೆಗೆದು ಮರಣೊತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ.

By suddi9

Leave a Reply

Your email address will not be published. Required fields are marked *