ಕಲಬುರಗಿ: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ–ಮೇಲ್, ಆತಂಕದಲ್ಲಿ ವಿದ್ಯಾರ್ಥಿಗಳು

ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದೆ. ಈ ಶಾಲೆ ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಯಾಗಿದ್ದು, ಮಧ್ಯಾಹ್ನ ಒಂದು ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಸಂದೇಶ ಕಂಡ ಕೂಡಲೆ ಶಾಲೆಯ ಸಿಬ್ಬಂದಿ ಮಕ್ಕಳನ್ನು ಮನೆಗೆ ಕಳುಹಿಸಿದ್ದಾರೆ. ಅಶೋಕ ನಗರ ಠಾಣೆ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಶಾಲೆಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಸಂದೇಶ ತಮಿಳುನಾಡಿನಿಂದ ಬಂದಿದೆ ಎಂದು ಶಂಕಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಶಾಲೆಗೆ ಕಲಬುರಗಿ ನಗರ ಪೋಲಿಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.