ವಿಟ್ಲ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ ಅನೇಕ ವಸ್ತುಗಳನ್ನು ದೋಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸರು ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಬಳಿಯಿದ್ದ ಒಂದು ಕಪ್ಪು ಬಣ್ಣದ ಇನ್ನೋವ ಕಾರು ಮತ್ತು ಸ್ಯಾಮ್ಸಂಗ್ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

ಈ ವೇಳೆ ಅರೋಪಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಜನವರಿ 3 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಮನೆಗೆ ಇಡಿ ಅಧಿಕಾರಿಗಳ ಹೆಸರಲ್ಲಿ ದಾಳಿ ಮಾಡಿ ದರೋಡೆ ಮಾಡಲಾಗಿತ್ತು.

By suddi9

Leave a Reply

Your email address will not be published. Required fields are marked *