Published On: Tue, Feb 4th, 2025

ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಜಯಾನಂದ ಪೆರಾಜೆ : ಕನ್ನಡ ಭವನ  ಪದಗ್ರಹಣ ಸಮಾರಂಭ – ಕನ್ನಡ ಬಾವುಟ ಹಸ್ತಾಂತರ

ಬಂಟ್ವಾಳ:ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ  ಹಿರಿಯ ಪತ್ರಕರ್ತ ಸಾಹಿತಿ ಜಯಾನಂದ ಪೆರಾಜೆ ಆಯ್ಕೆಯಾಗಿದ್ದು, ಕಾಸರಗೋಡು ಕನ್ನಡ ಭವನ ಸಭಾಂಗಣದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ಸ್ಥಾಪಕ ಸಂಚಾಲಕ ಡಾ.ವಾಮನ ರಾವ್ ಬೇಕಲ್ ಅಧ್ಯಕ್ಷತೆಯಲ್ಲಿ ಪದಗ್ರಹಣ ಸಮಾರಂಭ ಭಾನುವಾರ ನೆರವೇರಿತು. ರಾಜ್ಯ ಮಹಿಳಾ ಸಂಚಾಲಕಿಯಾಗಿ ಡಾ. ಶಾಂತ ಪುತ್ತೂರು,  ಕಾಸರಗೋಡು ಜಿಲ್ಲಾ ಅಧ್ಯಕ್ಷರಾಗಿ ಕವಿ ವಿರಾಜ್ ಅಡೂರು , ಗೌರವ ಅಧ್ಯಕ್ಷರಾಗಿ ಶಿಕ್ಷಣ ತಜ್ಞ  ವಿ.ಬಿ ಕುಳಮರ್ವ, ಕೋಶಾಧಿಕಾರಿಯಾಗಿ ಸಂಧ್ಯಾರಾಣಿ ಬೇಕಲ್ ಅಧಿಕಾರ ಸ್ವೀಕರಿಸಿದರು. ವಿವಿಧ ಪದಾಧಿಕಾರಿಗಳನ್ನು ಘೋಷಿಸಲಾಯಿತು.

ಕೇಂದ್ರದ ಪ್ರಧಾನ ಸಮಿತಿ ಕ಼ಚೇರಿ ಮುಳ್ಳಿಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ  ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ  ಅಧ್ಯಕ್ಷ ಡಾ. ಮಾನಸ ಮೈಸೂರು  ಅವರು ಕನ್ನಡ ಧ್ವಜವನ್ನು ಹಸ್ತಾಂತರಿಸಿ ಮಾತನಾಡಿ ಕನ್ನಡ ಭಾಷೆ ಸಂಸ್ಕೃತಿ ಉಳಿಸಲು ವಿವಿಧ ಕನ್ನಡ ಸಂಘಟನೆಗಳು ಕೈಜೋಡಿಸಬೇಕೆಂದರು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ.ಸಾ.ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿವೃತ್ತ ಪ್ರಾಂಶುಪಾಲ ಪ್ರೊ. ಪಿ.ಎನ್. ಮೂಡಿತ್ತಾಯ , ನಿವೃತ್ತ ಶಿಕ್ಷಕ ಬಾಲ ಮಧುರಕಾನನ, ಕಾಸರಗೋಡು ಜಿಲ್ಲಾ ಗಮಕ ಕಲಾ ಪರಿಷತ್ತಿನ  ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಮುಖಂಡರಾದ ಡಾ. ವೆಂಕಟ್ರಮಣ ಹೊಳ್ಳ, ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು , ಕವಯಿತ್ರಿ ರೇಖಾ ಸುದೇಶ್ ರಾವ್, ಕನ್ನಡ ಭವನದ ನಿರ್ದೇಶಕ ಪ್ರೊ. ಎ. ಶ್ರೀನಾಥ್ , ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಮೊದಲಾದವರು ಶುಭ ಹಾರೈಸಿದರು. 

ಡಾ.ವಾಮನ ರಾವ್ ಬೇಕಲ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಪರಿಷತ್ತಿನ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿದರು. ಚುಟುಕು ಸಾಹಿತಿ ವಿರಾಜ್ ಅಡೂರ ಅಧ್ಯಕ್ಷತೆಯಲ್ಲಿ ಅಂತಾರಾಜ್ಯ ಮಟ್ಟದ ಚುಟುಕು ಕವಿ ಗೋಷ್ಠಿ ನಡೆಯಿತು. ಕ.ಸಾ.ಪ. ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನಿರೂಪಿಸಿದರು.  ನರಸಿಂಹ ಭಟ್ ಏತಡ್ಕ ವಂದಿಸಿದರು

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter