ವಿಶ್ವ ಕಾನ್ಸರ್ ದಿನದ ಪ್ರಯುಕ್ತ ಆರೋಗ್ಯ ಮಾಹಿತಿ ಮತ್ತು ಉಚಿತ ತಪಾಸಣಾ ಶಿಬಿರ
ಬಂಟ್ವಾಳ: ಜೆಸಿಐ ಬಂಟ್ವಾಳ, ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕನ್ನಡ ಸಾಹಿತ್ಯ ಪರಿಷತ್ತು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ವಲಯ ಇದರ ಸಹಯೋಗದಲ್ಲಿ ಮಂಗಳೂರಿನ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಇದರ ಸಹಕಾರದೊಂದಿಗೆ ವಿಶ್ವ ಕಾನ್ಸರ್ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಮತ್ತು ಆರೋಗ್ಯ ಉಚಿತ ತಪಾಸಣಾ ಶಿಬಿರ ಮಂಗಳವಾರ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ನಡೆಯಿತು.
ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಶಿಬಿರ ಉದ್ಘಾಟಿಸಿ ಮಾತನಾಡಿ ಸರಿಯಾದ ಆಹಾರ ಕ್ರಮ, ಶಿಸ್ತುಬದ್ಧ ಜೀವನ ಹಾಗೂ ದೃಢ ಮನಸ್ಸಿನಿಂದ ಕ್ಯಾನ್ಸರ್ ರೋಗದಿಂದ ಗುಣಮುಖರಾಗಲು ಸಾಧ್ಯವಿದೆ ಎಂದರು.

ಜೆಸಿಐ ಬಂಟ್ವಾಳದ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಶ್ರುತಿ, ಎ.ಜೆ. ಆಸ್ಪತ್ರೆಯ ಸಮುದಾಯ ಆರೋಗ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಾಮನ ನಾಯಕ್, ಜೆಸಿಐ ಬಂಟ್ವಾಳದ ನಿಕಟಪೂವಾಧ್ಯಕ್ಷೆ ರಶ್ಮಿ ಶೆಟ್ಟಿ, ಕಾರ್ಯಕ್ರಮ ಸಂಯೋಜಕ ಸದಾನಂದ ಬಂಗೇರ ಉಪಸ್ಥಿತರಿದ್ದರು.
ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ದಂತ ವೈದ್ಯಾಧಿಕಾರಿ ಡಾ. ಆರತಿ, ಎ.ಜೆ. ಆಸ್ಪತ್ರೆಯ ಸಮುದಾಯ ಆರೋಗ್ಯ ವಿಭಾಗದ ಡಾ. ಶ್ರೀಶಾನಂದ ಕ್ಯಾನ್ಸರ್ ರೋಗದ ಬಗ್ಗೆ ಆರೋಗ್ಯ ಮಾಹಿತಿ ನೀಡಿದರು. ಕಾರ್ಯದರ್ಶಿ ಕಿಶೋರ್ ಕುಮಾರ್ ಆಚಾರ್ಯ ವಂದಿಸಿದರು. ಕೋಶಾಧಿಕಾರಿ ಜೀವಿತ ಯತೀಶ್ ಕರ್ಕೇರಾ, ಪೂರ್ವಾಧ್ಯಕ್ಷರಾದ ಯತೀಶ್ ಕರ್ಕೆರಾ, ರಾಜೇಂದ್ರ ಕೆ, ಉಪಾಧ್ಯಕ್ಷ ಉಮೇಶ್ ಪೂಜಾರಿ ಸಹಕರಿಸಿದರು. ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸಿದರು.